ನಾಪೋಕ್ಲು: ಮಕ್ಕಳ ದಿನಾಚರಣೆ ಪ್ರಯುಕ್ತ ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣ ಸಮಿತಿ ಆಯೋಜಿಸಿದ್ದ ರಾಜ್ಯಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಕೊಡಗಿನ ಮಡಿಕೇರಿ ಜವಾಹರ್ ನವೋದಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಎ.ಎಂ.ಡಿಯಾ ಪ್ರಥಮ ಸ್ಥಾನ ಪಡೆದಿದ್ದಾಳೆ. ಇವಳು ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೊಳಂಡ ಮಿಥುನ್ ಮಾಚಯ್ಯ ಮತ್ತು ನೀನಾ ಮಾಚಯ್ಯ ದಂಪತಿ ಪುತ್ರಿ.