ಜ.21ರಂದು ರಾಜ್ಯಮಟ್ಟದ ಕವಿಕಾವ್ಯ ಮೇಳ: ಡಾ.ಜೀಶಂಪ ಸಾಹಿತ್ಯ ವೇದಿಕೆ ಅಧ್ಯಕ್ಷ ಎಸ್.ಕೃಷ್ಣಸ್ವರ್ಣಸಂದ್ರ ಮಾಹಿತಿ

State level poetry fair press conference mandya
Published on

ಮಂಡ್ಯ: ಕರ್ನಾಟಕ ರತ್ನ ಡಾ.ಪುನೀತ್‌ರಾಜ್‌ಕುಮಾರ್ ಸ್ಮರಣಾರ್ಥ ಜ.21ರಂದು ನಗರದ ರೈತ ಸಭಾಂಗಣದಲ್ಲಿ 32ನೇ ರಾಜ್ಯಮಟ್ಟದ ಕವಿಕಾವ್ಯ ಮೇಳ, ವಿವಿಧ ಪ್ರಶಸ್ತಿ ಪ್ರದಾನ ಹಾಗೂ ಓ ಗುಣವಂತ ಕಿರುಚಿತ್ರ ಬಿಡುಗಡೆ, ಸಾಹಿತಿ ಹಾಗೂ ಸಮ್ಮೇಳನಾಧ್ಯಕ್ಷ ಡಾ.ಶಂಕರ ಹಲ್ಲೇಗೆರೆ ಅವರ ಕವನ ಸಂಕಲನ ಬಿಡುಗಡೆ ಸಮಾರಂಭ ಆಯೋಜಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ಎಸ್.ಕೃಷ್ಣ ಸ್ವರ್ಣಸಂದ್ರ ತಿಳಿಸಿದರು.

ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ ಸಹಯೋಗದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಆಯೋಜಿಸಿರುವ ವೇದಿಕೆ ಸಮಾರಂಭವನ್ನು ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜ್‌ಗೌಡ ಉದ್ಘಾಟಿಸಲಿದ್ದು, ಸನಾತನ ಧರ್ಮ ಜಾಗರಣ ಮಿಷನ್ ಮುಖ್ಯಸ್ಥ ಡಾ.ಆರ್.ಎಸ್.ರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಡಾ.ಎಚ್.ಎಸ್.ಮುದ್ದೇಗೌಡ ಸಮ್ಮೇಳನಾಧ್ಯಕ್ಷರಿಗೆ ಗೌರವ ಸಲ್ಲಿಸಲಿದ್ದು, ಶಾಸಕ ರವಿಕುಮಾರ್ ಗಣಿಗ ಕರ್ನಾಟಕ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡುವರು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕವಿಕಾವ್ಯ ಮೇಳಕ್ಕೆ ಕವಯತ್ರಿ ಡಾ.ಪದ್ಮಾ ಶ್ರೀನಿವಾಸ್ ಚಾಲನೆ ನೀಡಲಿದ್ದು, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಬನ್ನಂಗಾಡಿ ಸಿದ್ದಲಿಂಗಯ್ಯ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಂಗಲ ಶಿವಣ್ಣ, ಯುವ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಂಜುಳಾ ನಾರಾಯಣ್ ಭಾಗವಹಿಸಲಿದ್ದಾರೆಂದು ವಿವರಿಸಿದರು.

ಡಾ.ಚಂದ್ರಚೂಡೇಶ್ವರ ರಾಜು, ವಿಷ್ಣುತೇಜ, ಹಾವೇರಿ ನೇತ್ರಾವತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net