ರಾಜ್ಯಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

images - 2025-03-17T140158.730
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕೇಂದ್ರ ಬಸವ ಸಮಿತಿ ಬೆಂಗಳೂರು ವತಿಯಿಂದ ಬಸವ ಜಯಂತಿ ಅಂಗವಾಗಿ ಕಿತ್ತೂರು ರಾಣಿ ಚೆನ್ನಮ್ಮ ಐಕ್ಯಸ್ಥಳವಾದ ಬೈಲಹೊಂಗಲದಲ್ಲಿ ಮೇ 4ರಂದು ರಾಜ್ಯಮಟ್ಟದ ಕವಿಗೋಷ್ಠಿ ಆಯೋಜಿಸಲಾಗಿದೆ. ಉದಯೋನ್ಮುಖ ಕವಿಗಳಿಂದ ಬಸವೇಶ್ವರ, ಅಕ್ಕಮಹಾದೇವಿ, ಅಲ್ಲಮಪ್ರಭು, ಸಿದ್ಧರಾಮೇಶ್ವರ, ಚನ್ನಬಸವಣ್ಣ, ಮಡಿವಾಳಮಾಚಿದೇವ, ಇತರ ಶರಣರ ತತ್ವಗಳ ಕುರಿತು ಕವನಗಳನ್ನು ಆಹ್ವಾನಿಸಲಾಗಿದೆ. ಕವನ 30 ಸಾಲುಗಳಿಗೆ ಮಿಕ್ಕದಂತೆ ಕಾಗದದ ಒಂದು ಮಗ್ಗುಲಲ್ಲಿ ಬರೆದು ಅಥವಾ ಡಿಟಿಪಿ ಮಾಡಿಸಿ ಸ್ವ ವಿವರದೊಂದಿಗೆ ಮೋಹನ ಬಸನಗೌಡ ಪಾಟೀಲ, ಕಾರ್ಯಕಾರಿ ಸಮಿತಿ ಸದಸ್ಯ, ಕೇಂದ್ರ ಬಸವ ಸಮಿತಿ, ಬಸವ ನಿವಾಸ, ಚನ್ನಮ್ಮನಗರ ಮೊದಲನೇ ಅಡ್ಡರಸ್ತೆ, ಬೈಲಹೊಂಗಲ 591102 ಈ ವಿಳಾಸಕ್ಕೆ ಏ. 15ರೊಳಗೆ ಕಳುಹಿಸಬೇಕು ಎಂದು ಕೇಂದ್ರ ಬಸವ ಸಮಿತಿಯ ಅಧ್ಯಕ್ಷ ಡಾ. ಅರವಿಂದ ಜತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net