ರಾಜ್ಯಮಟ್ಟದ ವಿಜ್ಞಾನ ಸಮಾವೇಶಕ್ಕೆ ರಮ್ಯಾ, ಐಶ್ವರ್ಯ ಆಯ್ಕೆ

aml-2
Published on

ಐಮಂಗಲ (ಚಿತ್ರದುರ್ಗ ಜಿಲ್ಲೆ): ಹೋಬಳಿಯ ಪಾಲವ್ವನಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಜಿ.ಆರ್.ರಮ್ಯಾ ಹಾಗೂ ವಿ.ಐಶ್ವರ್ಯ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾರೆ.

ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ಕರ್ನಾಟಕ ವಿಜ್ಞಾನ ಜಿಲ್ಲಾ ಸಮಿತಿ ಸಹಯೋಗದಲ್ಲಿ ಜಿಲ್ಲಾ ಮಟ್ಟ ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯ ವಿಜ್ಞಾನ ಶಿಕ್ಷಕ ಟಿ.ಜೆ.ವೆಂಕಟೇಶ್ ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದು ಮುಖ್ಯಶಿಕ್ಷಕಿ ಎಚ್.ಎಂ.ಪುಷ್ಪವತಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net