

ಲಕ್ಷ್ಮೇಶ್ವರ: ಗದಗ ಕೆ.ಎಚ್.ಪಾಟೀಲ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಮೀಪದ ಶಿಗ್ಲಿ ಗ್ರಾಮದ ಗ್ರಾಮಭಾರತಿ ಶಿಕ್ಷಣ ಸಮಿತಿಯ ಎಸ್.ಎಸ್. ಕೂಡ್ಲಮಠ ಪ್ರೌಢಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಲಕ್ಷ್ಮೀ ಬಾಳಿಕಾಯಿ ಸರಪಳಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ, ಮಂಜುನಾಥ ಹಳೆರಿತ್ತಿ ಬಾಲಕರ ವಿಭಾಗದಲ್ಲಿ ಸರಪಳಿ ಗುಂಡು ಎಸೆತದಲ್ಲಿ ದ್ವಿತಿಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಕೆ.ಆರ್. ಲಮಾಣಿ ತರಬೇತಿ ನೀಡಿದ್ದರು.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಚೇರ್ಮನ್ ಎಸ್.ಪಿ. ಬಳಿಗಾರ, ಕಾರ್ಯದರ್ಶಿ ಸಿ.ಎಂ. ರಾಗಿ, ಮುಖ್ಯೋಪಾಧ್ಯಾಯ ಸಿ.ಬಿ. ಮೊಗಲಿ ಇತರರು ಹರ್ಷ ವ್ಯಕ್ತಪಡಿಸಿದ್ದಾರೆ.