

ನಾಪೋಕ್ಲು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆಯ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕವೂ ಶನಿವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಯುವ ಜನೋತ್ಸವ 2024ರ ಕಾರ್ಯಕ್ರಮ ಅಂಗವಾಗಿ ಮ್ಯಾರಥಾನ್ ಸ್ಪರ್ಧೆ ಹಮ್ಮಿಕೊಂಡಿತ್ತು.
ಈ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಬಿಎ ವಿದ್ಯಾರ್ಥಿ ಎಸ್.ಗೌತಮ್ ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲ ನಂದೀಶ್ ತಿಳಿಸಿದ್ದಾರೆ.