ರಾಜ್ಯ ಮಟ್ಟಕ್ಕೆ ಆಯ್ಕೆ

Untitled
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಆರ್​.ಎನ್​. ಶೆಟ್ಟಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ವಿವಿಧ ಕ್ರೀಡಾಕೂಟಗಳಲ್ಲಿ ಇಲ್ಲಿನ ಬಾಲ ಬಳಗ ಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಶಾಲೆಯ 9ನೇ ತರಗತಿಯ ಸಂದೇಶ ಹಿರೇಮಠ ಸ್ಕೇಟಿಂಗ್​ ಸ್ಪರ್ಧೆಯಲ್ಲಿ ಮತ್ತು 8ನೇ ತರಗತಿಯ ಹರ್ಷ ಸುಳ್ಳಳ್ಳಿ ಟೇಕ್ವಾಂಡೊ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net