

ಹುಬ್ಬಳ್ಳಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಕರಡಿಗುಡ್ಡ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಚದುರಂಗ ಪಂದ್ಯಾವಳಿಯಲ್ಲಿ ಹುಬ್ಬಳ್ಳಿಯ ಪಿ.ಸಿ. ಜಾಬಿನ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ ಸುಮಿತ ಮೆರ್ವಾಡೆ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಗೆ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಬಿ. ಕೋರೆ, ಆಡಳಿತ ಮಂಡಳಿ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಪದವಿ ಪ್ರಾಚಾರ್ಯ ಡಾ. ಎಲ್.ಡಿ. ಹೊರಕೇರಿ, ಪದವಿ ಪೂರ್ವ ಪ್ರಾಚಾರ್ಯ ಪ್ರೊ. ವಿ. ಆರ್. ವಾಘ್ಮೂಡೆ, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಪ್ರಭಾಕರನ್ ಟಿ. ಮತ್ತು ಉಮೇಶ ಡಿಡಗನ್ನವರ, ಕ್ರೀಡಾ ವಿಭಾಗದ ಮುಖ್ಯಸ್ಥೆ ಅಮ್ರಿತಾ ಅಣ್ಣಿಗೇರಿ, ಉಪನ್ಯಾಸಕರು ಮತ್ತು ಸಿಬ್ಬಂದಿ ಅಭಿನಂದಿಸಿದ್ದಾರೆ.