ಚದುರಂಗ ಸ್ಪರ್ಧೆದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

11 gkp 04
Published on

ಗೋಣಿಕೊಪ್ಪ: ಜಿಲ್ಲಾ ಮಟ್ಟದ ಚದುರಂಗ ಪಂದ್ಯಾವಳಿಯಲ್ಲಿ ಗೋಣಿಕೊಪ್ಪಲಿನ ಕೂರ್ಗ್ ಪಬ್ಲಿಕ್ ಪದವಿ ಪೂರ್ವ ಕಾಲೇಜಿನ (ಕಾಪ್ಸ್) ವಿದ್ಯಾರ್ಥಿಗಳು ಜಯ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಮಾದಾಪುರದ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮಾದಾಪುರದಲ್ಲಿ ಇತ್ತೀಚಿಗೆ ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಕೂರ್ಗ್ ಪಬ್ಲಿಕ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರೇಮಚಂದ್ರ ಸಾಗರ್, ಮನಸ್ವಿ ಪೊನ್ನಣ್ಣ ಮತ್ತು ಮಾನ್ಯಾ ಕಾವೇರಮ್ಮ ತಂಡ ಪ್ರಥಮ ಸ್ಥಾನ ಪಡೆದಿದೆ. ಚಾಮರಾಜನಗರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ಚದುರಂಗ ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಕಾಪ್ಸ್ ಪ್ರಾಂಶುಪಾಲ ಡಾ. ಎಂ.ರಾಮಚಂದ್ರನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net