ಪಾತ್ರಾಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

State Level Selection in Role Playing
ಬಾಗಲಕೋಟೆಯಲ್ಲಿ ಜಿಲ್ಲಾ ಹಂತದ ರಾಷ್ಟ್ರೀಯ ಜನಸಂಖ್ಯೆ ಶಿಕ್ಷಣ ಯೋಜನೆಯಡಿ ನಡೆದ ಪಾತ್ರಾಭಿನಯ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಚಿಕ್ಕಮುಚ್ಚಳಗುಡ್ಡದ ಸರ್ಕಾರಿ ಆದರ್ಶ ವಿದ್ಯಾಯದ ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಇದ್ದಾರೆ.
Published on

ಗುಳೇದಗುಡ್ಡ: ಬೆಂಗಳೂರಿನ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬಾಗಲಕೋಟೆ ಜಿಲ್ಲಾ ಶಿಕ್ಷಣ ಮತ್ತು ಇಳಕಲ್ಲದ ತರಬೇತಿ ಸಂಸ್ಥೆಯಿಂದ ಬಾಗಲಕೋಟೆಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಸಕ್ತ ಸಾಲಿನ ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಜಿಲ್ಲಾ ಹಂತದ ರಾಷ್ಟ್ರೀಯ ಜನಸಂಖ್ಯೆ ಶಿಕ್ಷಣ ಯೋಜನೆಯಡಿ ನಡೆದ ಪಾತ್ರಾಭಿನಯ ಸ್ಪರ್ಧೆಯಲ್ಲಿ ಚಿಕ್ಕಮುಚ್ಚಳಗುಡ್ಡದ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ವಿದ್ಯಾಲಯದ ರಾಜೇಶ್ವರಿ ಓಗೆನ್ನವರ, ಸಾಧನಾ ಕಲಾಲ, ವೈಷ್ಣವಿ ಕುಶಬಿ, ಸ್ವಾತಿ ಬಂಡಿವಡ್ಡರ, ಕೀರ್ತಿ ಹುಲ್ಲಿಕೇರಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸಿಂಚನಾ ವಾಸ್ಟರ್, ದೀಪ್ತಿ ಬಳಿಗೇರಿ ಸಂಗಡಿಗರು ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಬಸವರಾಜ ಸಿಂದಗಿಮಠ, ಕಾವ್ಯಾ ಪಾಟೀಲ ಅವರು ಮಾರ್ಗದರ್ಶನ ನೀಡಿದ್ದಾರೆ ಎಂದು ಶಾಲೆಯ ಪ್ರಭಾರಿ ಪ್ರಾಚಾರ್ಯ ಶಂಕರರಾವ ಕುಲಕರ್ಣಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net