27ಕ್ಕೆ ರಾಜ್ಯ ಮಟ್ಟದ ವಿಚಾರ ಸಂಕಿರಣ

how-to-reuse-plastic-spoon
Published on

ಮೈಸೂರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು ನಗರ ಘಟಕ, ಜೆಎಸ್‌ಎಸ್ ಮಹಿಳಾ ಕಾಲೇಜು ಕನ್ನಡ ವಿಭಾಗದಿಂದ ಮಾ.27ರಂದು ಬುಧವಾರ ಬೆಳಗ್ಗೆ 10.30ಕ್ಕೆ ಸರಸ್ವತಿಪುರಂನ ಜೆಎಎಸ್‌ಎಸ್ ಮಹಿಳಾ ಕಾಲೇಜು ನವಜ್ಯೋತಿ ಸಭಾಂಗಣದಲ್ಲಿ ದತ್ತಿ ಕಾರ್ಯಕ್ರಮದ ಅಂಗವಾಗಿ ವಚನ ಸಾಹಿತ್ಯ-ವರ್ತಮಾನದ ತಲ್ಲಣಗಳು ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ನಗರ ಘಟಕದ ಅಧ್ಯಕ್ಷ. ಮ.ಗು.ಸದಾನಂದಯ್ಯ ತಿಳಿಸಿದರು.

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಉದ್ಘಾಟನೆಯನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸಿ.ಸೋಮಶೇಖರ್ ನೆರವೇರಿಸಲಿದ್ದಾರೆ. ಹಿರಿಯ ಸಾಹಿತಿ ಸಿ.ಪಿ.ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜೆಎಸ್‌ಎಸ್ ಮಹಾ ವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ, ಸಂಸ್ಕೃತಿ ಚಿಂತಕ ಡಾ.ಜ್ಯೋತಿ ಶಂಕರ್, ಸರ್ಕಾರಿ ಮಹಾರಾಣಿ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ.ಬಿ.ವಿ.ವಸಂತಕುಮಾರ್, ಮೈಸೂರು ವಿಶ್ವವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ಡಿ.ಎಸ್.ಗುರು ಮೊದಲಾದವರು ವಿವಿಧ ವಿಷಯ ಕುರಿತು ಮಾತನಾಡಲಿದ್ದಾರೆ.

ಸಮಾರೋಪ ಭಾಷಣವನ್ನು ವಾಗ್ಮಿ ಪ್ರೊ.ಎಂ.ಕೃಷ್ಣಗೌಡ ನೆರವೇರಿಸಲಿದ್ದಾರೆ. ಇದೇ ವೇಳೆ ಎಲ್.ಶಿವಲಿಂಗಪ್ಪ ಅವರ ವಚನಾಂತರಂಗ ಚಿತ್ರಕಲಾ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net