ನಾಳೆಯಿಂದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ

mysore sports
Published on

ಉಡುಪಿ: ಕುಂದಾಪುರದ ಸುಣ್ಣಾರಿ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ ಡಿ.8ರಿಂದ 10ರವರೆಗೆ ಜರಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮೊದಲ ಬಾರಿಗೆ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ ಆಯೋಜಿಸಲಾಗುತ್ತಿದೆ. 33 ಶೈಕ್ಷಣಿಕ ಜಿಲ್ಲೆಗಳಿಂದ 33 ವಿದ್ಯಾರ್ಥಿನಿಯರು, 33 ವಿದ್ಯಾರ್ಥಿಗಳು ಭಾಗವಹಿಸಲಿದ್ದು, ರಾಷ್ಟ್ರಮಟ್ಟಕ್ಕೆ ಆಯ್ಕೆ ನಡೆಯಲಿದೆ. ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಹಾಗೂ ಪಂದ್ಯಾಟಕ್ಕೆ 7 ಕ್ರೀಡಾಂಗಣ ಸಜ್ಜುಗೊಳಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉದ್ಘಾಟನೆ: 8ರಂದು 3 ಗಂಟೆಗೆ ಕುಂದಾಪುರ ಬೋರ್ಡ್ ಹೈಸ್ಕೂಲ್‌ನಿಂದ ಪುರ ಮೆರವಣಿಗೆ ನಡೆಯಲಿದ್ದು, ಡಾ. ಉಮೇಶ್ ಪುತ್ರನ್ ಚಾಲನೆ ನೀಡಲಿದ್ದಾರೆ. ಸಾಯಂಕಾಲ 5.30ಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಪಂದ್ಯಾಟ ಉದ್ಘಾಟಿಸಲಿದ್ದಾರೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಎಕ್ಸಲೆಂಟ್ ಪಪೂ ಕಾಲೇಜಿನ ಪ್ರಾಂಶುಪಾಲ ಡಾ.ರಮೇಶ್ ಶೆಟ್ಟಿ, ಸುಜ್ಞಾನ ಎಜುಕೇಶನ್ ಟ್ರಸ್ಟ್‌ನ ಕೊಶಾಧಿಕಾರಿ ಭರತ್ ಶೆಟ್ಟಿ, ಕ್ರೀಡಾ ಸಂಯೋಜಕ ದಿನೇಶ್ ಕುಮಾರ್, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಮಂಜುನಾಥ್ ಜೋಗಿ, ಗಿರೀಶ್ ಕುಲಕರ್ಣಿ, ಜೀವನ್ ಶೆಟ್ಟಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net