ಸ್ಟೀವ್ ಜೆಫ್ ಲೋಬೋಗೆ ಬೆಳ್ಳಿ ಪದಕ

mng_29 jan stiv jef lobo
Published on

ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಒಲಿಂಪಿಕ್ ಅಸೋಸಿಯೇಶನ್ ಇವರ ವತಿಯಿಂದ ಎಮ್ಮೆಕೆರೆ ಈಜುಕೊಳದಲ್ಲಿ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಶಕ್ತಿ ಪಿ.ಯು. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸ್ಟೀವ್ ಜೆಫ್ ಲೋಬೋ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್. ಪ್ರಧಾನ ಸಲಹೆಗಾರ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಹೆಚ್ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net