14ರಂದು ರಾಜ್ಯಮಟ್ಟದ ಈಜು ಸ್ಪರ್ಧೆ

awimming
Published on

ಮಂಗಳೂರು: ನಗರದ ವಿ ಒನ್ ಅಕ್ವಾ ಸೆಂಟರ್ ವತಿಯಿಂದ ಸಂತ ಅಲೋಶಿಯಸ್ ಸ್ವಿಮ್ಮಿಂಗ್ ಪೂಲ್ ಮತ್ತು ಡಾಲಿನ್ ಅಕ್ವಾಟಿಕ್ಸ್ ಸಹಯೋಗದಲ್ಲಿ ರಾಜ್ಯ ಮಟ್ಟದ ಈಜು ಸ್ಪರ್ಧೆ ಆ.14ರಂದು ಬೆಳಗ್ಗೆ 9.30ಕ್ಕೆ ಸಂತ ಅಲೋಶಿಯಸ್ ಕಾಲೇಜಿನ ಈಜುಕೊಳದಲ್ಲಿ ನಡೆಯಲಿದೆ ಎಂದು ಮಂಗಳೂರು ಅಕ್ವಾಟಿಕ್ ಕ್ಲಬ್‌ನ ಅಧ್ಯಕ್ಷ ಡಾ.ನಾಗೇಂದ್ರ ನಾಯಕ್ ಸುಜೀರ್ ತಿಳಿಸಿದ್ದಾರೆ.
8- 17 ವರ್ಷದ ವಯೋಮಾನದ ಹುಡುಗ ಮತ್ತು ಹುಡುಗಿಯರಿಗೆ 6ವಿಭಾಗಗಳಲ್ಲಿ 80ಕ್ಕೂ ಅಧಿಕ ಸ್ಪರ್ಧೆಗಳು ನಡೆಯಲಿವೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಬಳಸುವ ಡಿಜಿಟಲ್ ತಂತ್ರಜ್ಞಾನವನ್ನು ಮೊದಲ ಬಾರಿಗೆ ಈ ಸ್ಪರ್ಧೆಗೆ ಬಳಸಿಕೊಳ್ಳಲಾಗುತ್ತಿದೆ. ಈಗಾಗಲೇ ಸ್ಪರ್ಧೆಗೆ 280ಕ್ಕೂ ಅಕ ಈಜುಪಟುಗಳು ನೋಂದಣಿ ಮಾಡಿಕೊಂಡಿದ್ದಾರೆ. ದ.ಕ.ಜಿಲ್ಲಾಕಾರಿ ಡಾ.ರಾಜೇಂದ್ರ ಕೆ.ವಿ ಉದ್ಘಾಟಿಸಲಿದ್ದಾರೆ. ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ಫಾ.ಮೆಲ್ವಿನ್ ಜೋಸೆಪ್ ಪಿಂಟೋ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ. ಜಿಲ್ಲಾ ಉಸ್ತುವಾರ ಸಚಿವ ವಿ. ಸುನಿಲ್ ಕುಮಾರ್ ಭಾಗವಹಿಸಲಿದ್ದಾರೆ ಎಂದರು. ವಿ ಒನ್ ಅಕ್ವಾ ಸೆಂಟರ್ ನಿರ್ದೇಶಕರಾದ ನವೀನ್ ಹಾಗೂ ರೂಪಾ ಪ್ರಭು, ತರಬೇತುದಾರ ಲೋಕರಾಜ್, ನಂದ ಗೋಪಾಲ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net