ಚಿಂತಾಮಣಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನೀಡಲಿರುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಮುಂಗಾನಹಳ್ಳಿ ಹೋಬಳಿಯ ಬಟ್ಲಹಳ್ಳಿಯ ಶ್ರೀ ವಿವೇಕಾನಂದ ವಿದ್ಯಾವರ್ಧಕ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಸ್.ಕೆ.ಕೃಷ್ಣಾರೆಡ್ಡಿ ಆಯ್ಕೆಯಾಗಿದ್ದಾರೆ. ಹಾವೇರಿ ಜಿಲ್ಲೆ ರಾಣಿ ಬೆನ್ನೂರಿನ ಪಿ.ಬಿ.ರಸ್ತೆಯಲ್ಲಿರುವ ಮೃತ್ಯುಂಜಯ ಸಭಾ ಭವನದಲ್ಲಿ ಸೆ.14ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿಕ್ಷಣ ಸಚಿವರು, ವಿಧಾನ ಪರಿಷತ್ ಸಭಾಪತಿ, ಶಾಸಕರು, ಇಲಾಖಾ ಅಧಿಕಾರಿಗಳ ಸಮ್ಮುಖದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಯಂದು ಉಪಸ್ಥಿತರಿರಲಿದ್ದಾರೆ ಎಂದು ಸಂಘದ ರಾಜ್ಯಾಧ್ಯಕ್ಷ ಎನ್. ರಾಜಗೋಪಾಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಕೆ.ರಾಜು ತಿಳಿಸಿದ್ದಾರೆ.