

ಆನೇಕಲ್: ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ಬಿ.ಶಿವಣ್ಣ ಅಭಿಮಾನಿಗಳ ಬಳಗದಿಂದ ಜ.31ರಿಂದ ಫೆ.2ರವರೆಗೆ ಆನೇಕಲ್ ಪಟ್ಟಣದ ಎಎಸ್‌ಬಿ ಮೈದಾನದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಎನ್.ಎಸ್.ಪದ್ಮನಾಭ ತಿಳಿಸಿದರು.ತಾಲೂಕಿನ ಚಂದಾಪುರ ಸೂರ್ಯ ಸಿಟಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಕಬಡ್ಡಿ ಪಂದ್ಯಾವಳಿಯ ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯಮಟ್ಟಡ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ. ರಾಜ್ಯಾದ್ಯಂತ 40 ತಂಡಗಳು ಭಾಗವಹಿಸುವ ನಿರೀಕ್ಷೆಯಿದ್ದು, ಕ್ರೀಡಾ ಸ್ಪರ್ಧಾರ್ಥಿಗಳಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.