ಇಂದು ಸಾರಿಗೆ ನೌಕರರ ರಾಜ್ಯ ಸಮ್ಮೇಳನ : ಕಲಬುರಗಿಯಲ್ಲಿ ಸಕಲ ಸಜ್ಜು

ಕಲಬುರಗಿ ನಗರದಲ್ಲಿ ಇಂದು ಸಾರಿಗೆ ನೌಕರರ ಸಮ್ಮೇಳನ ‌ನಡೆಯಲಿದೆ
IMG-20230911-WA0034
Published on

ವಿಜಯವಾಣಿ ಸುದ್ದಿಜಾಲ ಕಲಬುರಗಿ

ರಸ್ತೆ ಸಾರಿಗೆ ಸಂಸ್ಥೆ ನೌಕರರ ರಾಜ್ಯಮಟ್ಟದ ಸಮ್ಮೇಳನವು ಸೆ.೧೨ ಎಂದು ಬೆಳಗ್ಗೆ ೧೧ ಗಂಟೆಗೆ ನಗರದ ಜೇವರ್ಗಿ ರಸ್ತೆಯಲ್ಲಿರುವ ಕೋಠಾರಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಕೂಟದ ಸಂಸ್ಥಾಪಕ ಅಧ್ಯಕ್ಷ ಚಂದ್ರಶೇಖರ ಆರ್ ಮತ್ತು ಗೌರವಾಧ್ಯಕ್ಷ ಶೌಕತ್‌ಅಲಿ ಆಲೂರ ತಿಳಿಸಿದರು.
ಶ್ರೀಶೈಲ ಸಾರಂಗಮಠದ ಜಗದ್ಗುರು ಪೂಜ್ಯ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳ ಸನ್ನಿಧಾನದಲ್ಲಿ ಸಾರಿಗೆ ಸಚಿವ ರಾಮಲಿಂಗಾರಡ್ಡಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಧರ್ಮಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ, ಬಿ.ಆರ್.ಪಾಟೀಲ್, ಎಂ.ವೈ.ಪಾಟೀಲ್,  ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ  ಮೊದಲಾದವರು ಆಗಮಿಸುವರು ಎಂದು ಜಂಟಿಯಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಕ್ತಿ ಯೋಜನೆ ಜಾರಿಗೊಳಿಸುವ ಮೂಲಕ ಸಾರಿಗೆ ಸಂಸ್ಥೆಗಳನ್ನು ಆರ್ಥಿಕವಾಗಿ ಬಲಗೊಳ್ಳುವಂತೆ ಮಾಡಿದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಸಮ್ಮೇಳನ  ಏರ್ಪಡಿಸಲಾಗಿದೆ. ಅಲ್ಲದೆ ಸಮ್ಮೇಳನದಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವುದು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದ ಸೇರಿದಂತೆ ನೌಕರರ ಹಾಗೂ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಚಂದ್ರಶೇಖರ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net