

ಚಿತ್ರದುರ್ಗ: ಸಿರಿಗೆರೆ ಗ್ರಾಮದಲ್ಲಿ ಆ.10, 11ರಂದು ಗುರುಶಾಂತರಾಜ ದೇಶಿಕೇಂದ್ರ ಸ್ವಾಮೀಜಿಗಳ 86ನೇ ಶ್ರದ್ಧಾಂಜಲಿ ಅಂಗವಾಗಿ ರಾಜ್ಯಮಟ್ಟದ ವೀರಗಾಸೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳ ತಂಡಗಳು ಭಾಗವಹಿಸಬಹುದು. ಸ್ಪರ್ಧೆಯಲ್ಲಿ ವಿಜೇತರಾಗುವ ತಂಡಗಳಿಗೆ ನಗದು ಬಹುಮಾನ ನೀಡಲಾಗುವುದು. ಭಾಗವಹಿಸುವ ತಂಡಗಳಿಗೆ ಸಿರಿಗೆರೆಗೆ ಬಂದು ಹೋಗುವ ಬಸ್ ಪ್ರಯಾಣದ ವೆಚ್ಚವನ್ನು ನೀಡಲಾಗುವುದು. ಪ್ರತಿ ತಂಡ ಒಂದರಲ್ಲಿ 12 ಜನರು ಮಾತ್ರ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಬಿ.ಎಸ್.ಮರುಳಸಿದ್ದಯ್ಯ - 9986191968, 8861647555 ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.