

ಮೈಸೂರು: ಮೈಸೂರು ವಿವೇಕಾನಂದ ಯೋಗ ಫೌಂಡೇಷನ್, ಮೈಸೂರು ಯೋಗ ಒಕ್ಕೂಟ ವತಿಯಿಂದ ಜೂ.30 ರಂದು ಬೆಳಗ್ಗೆ 8ಕ್ಕೆ ಮೈಸೂರು ವಿಶ್ವ ವಿದ್ಯಾಲಯದ ಯೋಗ ಭವನದಲ್ಲಿ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಯೋಗಗುರು ಡಾ. ಗಣೇಶ್ ಕುಮಾರ್ ಹೇಳಿದರು.
ಸ್ಪರ್ಧೆಯು 8 ವರ್ಷಕ್ಕಿಂತ ಒಳಗಿನವರು, 8 ರಿಂದ 10 ವರ್ಷ, 11 ರಿಂದ 14 ವರ್ಷ, 15 ರಿಂದ 20 ವರ್ಷ, 21 ರಿಂದ 30 ವರ್ಷ, 31 ರಿಂದ 40 ವರ್ಷ, 41 ರಿಂದ 50 ವರ್ಷ ಹಾಗೂ 50 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಪ್ರತಿ ವಿಭಾಗದಲ್ಲೂ ಬಾಲಕ, ಬಾಲಕಿ, ಯುವಕ, ಯುವತಿ ಹಾಗೂ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ನಗದು ಬಹುಮಾನ ನೀಡಲಾಗುವುದು. ಸೋಲೋ ಆರ್ಟಿಸ್ಟಿಕ್ ಯೋಗಾಸನ ಸ್ಪರ್ಧೆಯಲ್ಲಿ ಬಾಲಕ, ಬಾಲಕಿಯರಿಗೆ ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಮಾಹಿತಿಗೆ ಮೊ:96200 4686 ಸಂಪರ್ಕಿಸಬಹುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಯೋಗಪಟುಗಳಾದ ಶಶಿಕುಮಾರ್ ಹಾಗೂ ಗೀತಾ ಕುಮಾರ್ ಇದ್ದರು.