

ಹುಬ್ಬಳ್ಳಿ: ಇಲ್ಲಿಯ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಕಾರ್ಗಿಲ್ ವಿಜಯೋತ್ಸವ ದಿನವನ್ನು ಆಚರಿಸಲಾಯಿತು.
ಕಾರ್ಗಿಲ್ ಯುದ್ಧದಲ್ಲಿ ಪಾಲ್ಗೊಂಡಿದ್ದ ರಾಜು ಶಿರೂರ, ಶಾಂತಾರಾಮ ಭಟ್, ಹನುಮಂತಗೌಡ ಪಾಟೀಲ, ಟಿ. ಶಂಕರ, ಕರೆಲೆಪ್ಪ ಡೊಳ್ಳಿನ ಅವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಜಿ ಸೈನಿಕ ಟಿ. ಶಂಕರ, ಕಾರ್ಗಿಲ್ ಯುದ್ಧದಲ್ಲಿ 527 ಸೈನಕರನ್ನು ಕಳೆದುಕೊಂಡಿದ್ದೇನೆ. ದಿ. ಅಟಲ್‌ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಕರೆ ನೀಡಿದ್ದ ಯುದ್ಧದ ಸಂದರ್ಭದಲ್ಲಿ ಈಗಿನಷ್ಟು ಸವಲತ್ತು ಇರಲಿಲ್ಲ. ಆದರೂ ಪಾಕಿಸ್ಥಾನ ವಿರುದ್ಧದ ಕಾರ್ಗಿಲ್‌ನಲ್ಲಿ ನಾವು ಗೆದ್ದಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ ನಡೆಸಿದ್ದರಿಂದ ಪಾಕಿಸ್ತಾನ ತತ್ತರಿಸಿ ಹೋಗಿತ್ತು. ಈಗ ನಮ್ಮ ಸೈನಿಕರಿಗೆ ಅತ್ಯಾಧುನಿಕ ಸವಲತ್ತುಗಳು ಸಿಗುತ್ತಿವೆ ಎಂದರು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ನಾವು ನಮ್ಮ ಮನೆಯಲ್ಲಿ ಆರಾಮದಿಂದ ಇರಲು ಸೈನಿಕರು ಕಾರಣ. ಅವರಿಂದ ನಮ್ಮ ದೇಶ ಸುರಕ್ಷಿತವಾಗಿದೆ ಎಂದರು.
ಮಹಾನಗಾರ ಜಿಲ್ಲಾ ಉಪಾಧ್ಯಕ್ಷ ಕೃಷ್ಣ ಗಂಡಗಾಳೆಕರ ಅಧ್ಯಕ್ಷತೆ ವಹಿಸಿದ್ದರು.
ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ವಸಂತ ನಾಡಜೋಶಿ, ಬಸವರಾಜ ಗರಗ , ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ರಾಜು ಕಾಳೆ , ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಸತೀಶ ಶೇಜವಾಡಕರ, ಮಾಜಿ ಮಹಾಪೌರ ರಾಮಣ್ಣ ಬಡಿಗೇರ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಈಶ್ವರಗೌಡ ಪಾಟೀಲ, ಜಿಲ್ಲಾ ವಕ್ತಾರ ರಾಜು ಕೋರ್ಯಾಣಮಠ ಇತರರು ಉಪಸ್ಥಿತರಿದ್ದರು.