ಮೈಸೂರಿನಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ ಸಭೆ

State Police Director General Dr. M.A. Salim meeting in Mysore
Published on

ಮೈಸೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ನಗರಕ್ಕೆ ಬುಧವಾರ ಭೇಟಿ ನೀಡಿ ನಗರದಲ್ಲಿ ಪೊಲೀಸ್ ಅಧಿಕಾರಿಗಳೊ ಂದಿಗೆ ಸಭೆ ನಡೆಸಿದರು. ಅಲ್ಲದೆ, ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಆಷಾಢ ಶುಕ್ರವಾರಕ್ಕೆ ಕೈಗೊಂಡಿರುವ ಭದ್ರತೆ ಕುರಿತು ಪರಿಶೀಲನೆ ನಡೆಸಿದರು.

ಅಧಿಕಾರಿಗಳು ಚಾಮುಂಡಿ ಬೆಟ್ಟದಲ್ಲಿನ ಭದ್ರತಾ ವ್ಯವಸ್ಥೆಯ ಕುರಿತ ಪಿಪಿಟಿ ಪ್ರದರ್ಶಿಸಿದರು. ಅಲ್ಲದೆ, ಬಾಕಿ ಉಳಿದಿರುವ ಪ್ರಕರಣಗಳ ಮಾಹಿತಿ ನೀಡಿದರು. ನಗರದಲ್ಲಿ ಕಾನೂನು ಸುವ್ಯವಸ್ಥೆ ಕೈಗೊಳ್ಳಲು ಅನುಸರಿಸಬೇಕಾದ ಕ್ರಮಗಳ ಕುರಿತು ಸಲೀಂ ಅಗತ್ಯ ಸಲಹೆಗಳನ್ನು ನೀಡಿದರು. ಆನ್‌ಲೈನ್ ವಂಚನೆ ಪ್ರಕರಣ ಹೆಚ್ಚುತ್ತಿದ್ದು, ತಂತ್ರಜ್ಞಾನದ ಕುರಿತು ಅರಿವು ಇರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ದೇವರಾಜ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಗೆ ನಿರ್ದೇಶನ ನೀಡಿದರು.

ಈ ಸಂದರ್ಭ ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಡಿಸಿಪಿಗಳಾದ ಬಿಂದು ಮಣಿ, ಕೆ.ಎಸ್.ಸುಂದರ್ ರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net