

ಚಿತ್ರದುರ್ಗ: ಮೂವತ್ತೇಂಟು ತಿಂಗಳ ವೇತನ ಪರಿಷ್ಕರಣೆ ಹಿಂಬಾಕಿ ಕೊಡುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯರಸ್ತೆ ಸಾರಿಗೆ ನೌಕರರು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಎಐಟಿಯುಸಿ ಜಿಲ್ಲಾಧ್ಯಕ್ಷ,ರಾಜ್ಯರಸ್ತೆ ಸಾರಿಗೆ ನಿಗಮ ಚಿತ್ರ ದುರ್ಗ ವಿಭಾಗದ ಗೌರವಾಧ್ಯಕ್ಷ ಸುರೇಶ್‌ಬಾಬು ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಸಂಸ್ಥೆ ನೌಕರರು ಹಗಲು-ರಾತ್ರಿ ಎನ್ನದೇ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. 38ತಿಂಗಳ ವೇತನ ಪರಿಷ್ಕರಣೆ ಹಿಂಬಾಕಿ ಕೇಳಿದರೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದಿನ ಸರ್ಕಾರದೆಡೆ ಬೆರಳು ತೋರಿಸುತ್ತಿದ್ದಾರೆ.
ಬೆಂಗಳೂರಲ್ಲಿ ಪ್ರತಿಭಟನೆ ಮಾಡಿದಾಗ ಎಸ್ಮಾಂ ಜಾರಿ ಮಾಡುವುದಾಗಿ ರಾಜ್ಯಸರ್ಕಾರ ಬೆದರಿಸಿದೆ. ಸರ್ಕಾರಿ ಬಸ್‌ಗಳನ್ನು ನಿಲ್ಲಿಸಿ ಖಾ ಸಗಿ ಬಸ್‌ಗಳನ್ನು ಓಡಿಸುತ್ತೇವೆ ಎಂದು ಸಾರಿಗೆ ಸಚಿವರ ಹೇಳಿಕೆ ಖಂಡನೀಯ. ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆ ಅಗಲಿದೆ, ಆದರೆ ನೊಂದ ನಮ್ಮ ನೌಕರರು ಪ್ರತಿಭಟನೆಗೆ ಇಳಿಯುವುದು ಅನಿವಾರ‌್ಯವಾಗಿದೆ. ಸರ್ಕಾರ ನ್ಯಾಯಯುತ ಬೇಡಿಕೆ ಈಡೇರಿಸಿದ್ದರೆ ಮುಷ್ಕರಕ್ಕೆ ಮುಂದಾಗುತ್ತಿರಲಿಲ್ಲ.
ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ ಎನ್ನುವ ಸಿಎಂ ಸಿದ್ದರಾಮಯ್ಯ ಅವರಿಗೆ ನೌಕರರ ವೇತನ ಹಿಂಬಾಕಿ ಬಿಡುಗಡೆ ಮಾಡಲು ಯಾಕೆ ನೀ ಸಾಧ್ಯವಾಗಿಲ್ಲವೆಂದು ಪ್ರಶ್ನಿಸಿದರು.
ಕೆಎಸ್‌ಆರ್‌ಟಿಸಿ ಸ್ಟಾೃಪ್ ಆ್ಯಂಡ್ ವರ್ಕರ್ಸ್ ಫೆಡರೇಶನ್,ಅಖಿಲ ಕರ್ನಾ ಟಕ ರಾಜ್ಯರಸ್ತೆ ಸಾರಿಗೆ ನೌಕರರ ಮಹಾಮಂಡಳ,ರಾಜ್ಯ ರ ಸ್ತೆ ಸಾರಿಗೆ ನೌಕರರ ಫೆಡರೇಶನ್,ಕೆಎಸ್‌ಆರ್‌ಟಿಸಿ ಪರಿಶಿಷ್ಟ ಜಾತಿ ಮತ್ತು ಪರಿ ಶಿಷ್ಟ ಪಂಗಡ ನೌಕರರ ಸಂಘ,ರಾಜ್ಯರಸ್ತೆ ಸಾರಿಗೆ ಸಂಸ್ಥೆ ಪರಿ ಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಧಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ರಾಜ್ಯರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘಗಳು ಸೇರಿದಂತೆ ಇತರೆ ಸಂಘ-ಸಂಸ್ಥೆಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿವೆ ಎಂದರು.
ಪ್ರಮುಖರಾದ ಕಾಂತರಾಜ್,ರಹೀಂಸಾಬ್,ಟಿ.ಅಶೋಕ್,ಉಮೇಶ್, ಟಿ.ಅಜ್ಜಣ್ಣ,ಮೂರ್ತಿನಾಯ್ಕ,ರಾಮಾಂಜನೇಯ,ರಾಜಪ್ಪ, ಎ.ಕೆ.ಮಹದೇವಪ್ಪ,ಎನ್.ಪಿ.ರವಿ,ಗೊಲ್ಲಾಳಪ್ಪ ಗೌಡ,ಉಮಾಪತಿ ಸುದ್ದಿಗೋಷ್ಠಿಯಲ್ಲಿ ಇದ್ದರು.
----