ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಮುಂದೂಡಿಕೆ

vokkaligara sangha
Published on

ಬೆಂಗಳೂರು: ಮುಂದಿನ ತಿಂಗಳು ನಡೆಯಬೇಕಿದ್ದ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯನ್ನು ಕೋವಿಡ್ ಕಾರಣದಿಂದ ಮುಂದೂಡಲಾಗಿದೆ ಎಂದು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಇಂದು ತಿಳಿಸಿದ್ದಾರೆ.

ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸುವಂತೆ ಕೃಷ್ಣೆಗೌಡ ಎನ್ನುವರು ಹೈಕೋರ್ಟ್​ಗೆ ಕಳೆದ ವರ್ಷ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ್ದ ನ್ಯಾಯಾಲಯ ಮೂರು ತಿಂಗಳ ಒಳಗಾಗಿ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ ಎಂದು ಮಾರ್ಚ್​ 5 ರಂದು ಆದೇಶಿಸಿತ್ತು. ಅದರಂತೆ ಮೇ 15 ರಂದು ಚುನಾವಣೆ ನಿಗದಿಯಾಗಿತ್ತು.

ಆದರೆ ಪ್ರಸ್ತುತ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಚುನಾವಣೆ ನಡೆಸುವುದು ಕಷ್ಟ ಎಂದು ಸಹಕಾರ ಇಲಾಖೆ ಹೈಕೋರ್ಟ್​​​ಗೆ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ಅರ್ಜಿ ಮಾನ್ಯ ಮಾಡಿರುವ ನ್ಯಾಯಾಲಯ ಕೋವಿಡ್ ಪರಿಸ್ಥಿತಿ ತಿಳಿಯಾಗುವವರೆಗೂ ಒಕ್ಕಲಿಗರ ಸಂಘಕ್ಕೆ ಚುನಾವಣೆಯನ್ನು ಮುಂದೂಡಲು ಆದೇಶ ನೀಡಿದೆ.

ಐಎಎಸ್ ಅಧಿಕಾರಿ ಪಿ ಎನ್ ರವೀಂದ್ರ ಅವರು ಚುನಾವಣಾ ಅಧಿಕಾರಿಯಾಗಿದ್ದರು. ಚುನಾವಣೆಗೆ ನಾಮಪತ್ರ ಸಲ್ಲಿಸುವ ಅವಧಿ ಏಪ್ರಿಲ್ 21 ರಿಂದ ಆರಂಭವಾಗಿತ್ತು. ಆದರೆ ಯಾವುದೇ ನಾಮಪತ್ರಗಳು ಸಲ್ಲಿಕೆಯಾಗಿರಲಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net