ಇಂದಿನಿಂದ ಉಮಾಮಹೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

chn tavarekeree
Published on

ಚನ್ನಗಿರಿ: ತಾಲೂಕಿನ ತಾವರೆಕೆರೆ ಗ್ರಾಮದ ಶಿಲಾಮಠದಲ್ಲಿ ಶ್ರೀ ಉಮಾಮಹೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಡಿ.23 ರಿಂದ 25 ರವರೆಗೆ ನಡೆಯಲಿದೆ ಎಂದು ತಾವರೆಕರೆ ಶಿಲಾಮಠದ ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿ ತಿಳಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿ.25ರ ಬೆಳಗ್ಗೆ 6ಗಂಟೆಗೆ ಶ್ರೀ ಕ್ಷೇತ್ರನಾಥ ಉಮಾಮಹೇಶ್ವರ ಸ್ವಾಮಿ, ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ, ಶ್ರೀ ಕುಡ್ಲೂರು ವೀರಭದ್ರಸ್ವಾಮಿ, ಆದಿಶಕ್ತಿ ಶ್ರೀ ಚೌಡೇಶ್ವರಿ ದೇವಿಗೆ ಮಹಾಭಿಷೇಕ, ಶಿವಸಹಸ್ರನಾಮ ಸಹಿತ ಮಹಾಮಂಗಳಾರತಿ, 10ಗಂಟೆಗೆ ಧ್ವಜಾರೋಹಣ ನಡೆಯಲಿದೆ.

ಸಂಜೆ 5ಕ್ಕೆ ಶಂಕರಿಪುರದ ಶ್ರೀ ಬಸವೇಶ್ವರ ಸ್ವಾಮಿ ಮತ್ತು ಹೆಗ್ಗುಂದಲೆ ವೀರಭದ್ರಸ್ವಾಮಿ ಆಗಮನ ಹಾಗೂ 5.30 ರಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಸಮಾರಂಭ ನಡೆಯಲಿದೆ.

ಸಮಾರಂಭದ ದಿವ್ಯ ಸಾನಿಧ್ಯವನ್ನು ಎಡೆಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಮಹಾಸ್ವಾಮಿ ಮತ್ತು ಧಾರವಾಡದ ಮುಕ್ತಿಮಂದಿರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿ ವಹಿಸಲಿದ್ದಾರೆ.

ಹುಣಸೆಘಟ್ಟ ಹಾಲಸ್ವಾಮಿ ಮಠದ ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮಿ, ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿ, ಚಿಕ್ಕಮಗಳೂರು ಶಂಕರದೇವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿ, ತುಮಕೂರು ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿ, ಕೋಲಾರದ ನಾಗಲಾಪುರ ಮಠದ ತೇಜೇಶಲಿಂಗ ಶಿವಾಚಾರ್ಯ ಸ್ವಾಮಿ, ಶಿವಾನಂದ ಶಿವಾಚಾರ್ಯ ಸ್ವಾಮಿ, ತೇಜೇಶ್ವರ ಶಿವಾಚಾರ್ಯ ಸ್ವಾಮಿ ಭಾಗವಹಿಸಲಿದ್ದಾರೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಬಸವರಾಜ ವಿ. ಶಿವಗಂಗಾ ವಹಿಸಲಿದ್ದಾರೆ. ಉದ್ಘಾಟನೆಯನ್ನು ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಡಾ. ಪ್ರಭಾಮಲ್ಲಿಕಾರ್ಜುನ್ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ಆರ್.ಟಿ. ಪ್ರಶಾಂತ್, ಮಾಡಾಳು ಮಲ್ಲಿಕಾರ್ಜುನ್, ವಡ್ನಾಳ್ ಅಶೋಕ್, ಮಹಾಲಿಂಗಶಾಸ್ತ್ರಿ, ಟಿ.ವಿ. ಜಗದೀಶ್ ಭಾಗವಹಿಸುತ್ತಾರೆ. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮತ್ತು ಶಿವಮೊಗ್ಗದ ಶಿವಶಕ್ತಿ ಸಮಾಜದ ಅಧ್ಯಕ್ಷೆ ಅನ್ನಪೂರ್ಣೇಶ್ವರಿ ಇವರಿಗೆ ಶ್ರೀ ಸಿದ್ದಲಿಂಗ ಶಿವಾಚಾರ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.

ಡಿ.24 ರಂದು ಬೆಳಗ್ಗೆ 6ಗಂಟೆಯಿಂದ ಗ್ರಾಮದಲ್ಲಿ ಹೂವಿನ ಅಡ್ಡಪಲ್ಲಕ್ಕಿ ಉತ್ಸವ ಮತ್ತು ಗುಗ್ಗುಳ ಸೇವೆಯೊಂದಿಗೆ ತೋಟಕ್ಕೆ ದಯಮಾಡಿಸುವುದು ತೋಟದಲ್ಲಿ ಪೂಜೆ ಪ್ರಸಾದ ವಿನಿಯೋಗ ನಡೆಯಲಿದೆ. ಡಿ.25 ರ ಬುಧವಾರ ಬೆಳಗ್ಗೆ ವಿಶೇಷ ಪೂಜೆ ನಡೆದು ಸಂಜೆ 6.30ಕ್ಕೆ ಶ್ರೀ ಸ್ವಾಮಿಯವರ ಪುರ ಪ್ರವೇಶ ನಡೆಯುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net