ರಾಜ್ಯದ ಮಾನ ಹರಾಜಿಗಿಟ್ಟ ಕಮಿಷನ್ ಕಾಟ; ಮಾಜಿ ಸಿಎಂ ಬೇಸರ

Basavaraj Bommai
Published on

ಬೆಂಗಳೂರು: ಬೆಂಗಳೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವದಲ್ಲಿ ಖ್ಯಾತ ಸರೋದ್ ವಾದಕ ಪಂ. ರಾಜೀವ್ ತಾರಾನಾಥ್ ಅವರಿಗೆ ಕಾರ್ಯಕ್ರಮ ನೀಡಲು ಕಮಿಷನ್ ಕೇಳಿರುವುದು ರಾಜ್ಯದ ಮಾನ ಹರಾಜು ಆಗುವಂತೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸರಣಿ ಸಂದೇಶ ಹಂಚಿಕೊಂಡಿರುವ ಅವರು, ಅಧಿಕಾರಿಗಳ ವರ್ಗಾವಣೆ, ಗುತ್ತಿಗೆದಾರರಿಗೆ ಬಿಲ್ ನೀಡಲು ಕಮಿಷನ್ ಪಡೆಯುತ್ತಿದ್ದ ಈ ಸರ್ಕಾರದ ಕಮಿಷನ್ ದಂಧೆ ವಿಶ್ವ ವಿಖ್ಯಾತ ಮೈಸೂರು ದಸರಾಗೂ ವಿಸ್ತರಿಸಿದ್ದು ನಾಡಿನ ದುರಂತವೆಂದು ಕಿಡಿಕಾರಿದ್ದಾರೆ.

ಖ್ಯಾತ ಸರೋದ್ ವಾದಕ ಪಂ. ರಾಜೀವ್ ತಾರಾನಾಥ್ ಅವರಿಗೆ ದಸರಾದಲ್ಲಿ ಕಾರ್ಯಕ್ರಮ ನೀಡಲು ಅವಕಾಶ ಕಲ್ಪಿಸಲು ಅಧಿಕಾರಿಗಳು ಕಮಿಷನ್ ಕೇಳಿದ್ದು ಕರ್ನಾಟಕದ ಮಾನ ಹರಾಜಾಗುವಂತೆ ಮಾಡಿದೆ. ಇಂತಹ ಅತಿ ಭ್ರಷ್ಟ ಸರ್ಕಾರವನ್ನು ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಕಂಡಿರಲಿಲ್ಲ.

ಖ್ಯಾತ ಸರೋದ್ ವಾದಕ ಪಂ. ರಾಜೀವ್ ತಾರಾನಾಥ್ ಅವರೇ ಕಮಿಷನ್ ಬೇಡಿಕೆಯನ್ನು ಮಾಧ್ಯಮಗಳ ಮೂಲಕ ಬಹಿರಂಗ ಪಡಿಸಿದ್ದು, ಕಮಿಷನ್ ಕೇಳಿದ ಅಧಿಕಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net