ಹಾಲಿನ ದರ ಇಳಿಕೆ ಮಾಡಿದರೆ ರಾಜ್ಯವ್ಯಾಪಿ ಹೋರಾಟ : ರಾಜ್ಯ ರೈತ ಸಂಘ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ

ಅಧಿವೇಶನದಲ್ಲಿ ಬರ ನಿರ್ಮೂಲನೆಗೆ ಸಂಕಲ್ಪ ಮಾಡಲಿ: ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಪಟ್ಟು
ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ Resolve to eradicate drought during the session: Farmers' Association President Badagalapura Nagendra insists.
Published on: 

ಮೈಸೂರು: ಬಿಜೆಪಿ ಹಾಗೂ ಇತರರ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಹಿಂಪಡೆದೆ ಅಥವಾ ಕಡಿಮೆ ಮಾಡಿದರೆ ರಾಜ್ಯಾದ್ಯಂತ ರೈತರು ಬೀದಿಗಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಸಿದರು.

ಹಾಲಿನ ದರ ಹೆಚ್ಚಳ ಮಾಡಲಾಗಿದೆ ಎಂದು ಬೊಬ್ಬೆ ಹೊಡೆಯುತ್ತಿರುವ ಬಿಜೆಪಿಯವರು ಹಾಗೂ ಇನ್ನಿತರರು ಕೇಂದ್ರ ಸರ್ಕಾರ ಡೀಸೆಲ್, ಪೆಟ್ರೋಲ್ ದರ ಏರಿಸಿದಾಗ, ರಸಗೊಬ್ಬರ ಬೆಲೆ ಗಗನಕ್ಕೇರಿದಾಗ ಏಕೆ ಸುಮ್ಮನಿದ್ದರು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ನ.6 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಬ್ಬು ಬೆಳೆಗಾರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೊಡ್ಡಮಟ್ಟದ ಹೋರಾಟ ಆಯೋಜಿಸಲಾಗುವುದು.ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರರ ನಡುವೆ ಸರ್ಕಾರ ನಡೆಸಿದ ಮಾತುಕತೆ ಫಲಪ್ರದವಾಗಿಲ್ಲ. ಹೀಗಾಗಿ ಈ ಬೃಹತ್ ಹೋರಾಟ ಆಯೋಜಿಸಿದ್ದೇವೆ. ನಾವು ಕಬ್ಬಿಗೆ ಅತಿ ಹೆಚ್ಚು ದರ ನಿಗದಿ ಮಾಡಿ ಎಂದೇನು ಕೇಳುತ್ತಿಲ್ಲ, ಬದಲಾಗಿ ನ್ಯಾಯಯುತ ಬೆಲೆ ನೀಡಿ ಎಂದಷ್ಟೇ ಕೇಳುತ್ತಿದ್ದೇವೆ. ಸಕ್ಕರೆಯನ್ನು ವಾಣಿಜ್ಯ ಉದ್ದೇಶಕ್ಕೆ ದೊಡ್ಡ ಪ್ರಮಾಣದಲ್ಲಿ ಬಳಕೆ ಮಾಡಲಾಗುತ್ತಿದ್ದು, ವಾಣಿಜ್ಯ ಉದ್ದೇಶಕ್ಕೆ ಬಳಸುವ ಸಕ್ಕರೆ ಹೆಚ್ಚಿನ ದರ ವಿಧಿಸಿದರೆ ಕಬ್ಬಿಗೆ ಉತ್ತಮ ಬೆಲೆ ದೊರೆಯಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನ ನಡೆಸಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಮಂಡಕಳ್ಳಿ ಮಹೇಶ್, ಎಣ್ಣೆಹೊಳೆಕೊಪ್ಪಲು ಮಂಜು, ಹೊಸಕೋಟೆ ಬಸವರಾಜು, ಕೆಂಪುಗೌಡ, ಮಹದೇವು ಇದ್ದರು.