

ಮೈಸೂರು: ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ಅಪೂರ್ವ ಸ್ನೇಹ ಬಳಗದ ವತಿಯಿಂದ ಶೃಂಗೇರಿ ಶಾರದಾ ಪೀಠದ ಪೀಠಾಧಿಪತಿ ವಿಧುಶೇಖರಭಾರತೀ ಸ್ವಾಮೀಜಿ ಅವರ 33ನೇ ವರ್ಧಂತಿ ಮಹೋತ್ಸವ ಅಂಗವಾಗಿ ನಗರದ ಸಂಸ್ಕೃತ ಪಾಠ ಶಾಲೆ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಣೆ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ಧರ್ಮ ಮತ್ತು ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳಿದಂತೆ, ಅವುಗಳ ಮಹತ್ವ ಅರಿಯುವ ಕಾರ್ಯ ಮಾಡಬೇಕು. ಗುರುಗಳನ್ನು, ತಂದೆ-ತಾಯಿಯನ್ನು ಪ್ರೀತಿಸಿ ಗೌರವಿಸಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಮರೆಯಾಗುತ್ತಿರುವ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಎಲ್ಲರು ಶ್ರಮಿಬೇಕು ಎಂದು ಹೇಳಿದರು.
ಈ ಸಂದರ್ಭ ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಪದಾಧಿಕಾರಿಗಳಾದ ಸುಚೇಂದ್ರ, ಜತ್ತಿ ಪ್ರಸಾದ್, ಅಜಯ್ ಶಾಸ್ತ್ರಿ, ಶ್ರೀಕಾಂತ್ ಕಶ್ಯಪ್, ಪ್ರಶಾಂತ್ ಹಾಗೂ ಇತರರು ಇದ್ದರು.