ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸಿ

CTD 21sangolli-lll
Published on

ಚಿತ್ರದುರ್ಗ: ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಸ್ಥಾಪಿಸುವಂತೆ ಆಗ್ರಹಿಸಿ ಜಿಲ್ಲಾ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೇನೆ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ದೇಶಭಕ್ತ ರಾಯಣ್ಣ ನಾಡಿನ ಜನರ ಸ್ವಾಭಿಮಾನದ ಸಂಕೇತ. ಆದರೆ, ಈಚೆಗೆ ಹೊಳೆನರಸೀಪುರದಲ್ಲಿ ರಾಯಣ್ಣನ ಪ್ರತಿಮೆ ತೆರವುಗೊಳಿಸಿ ನಾಡಿನ ಜನರ ಮನಸ್ಸಿಗೆ ನೋವುಂಟು ಮಾಡಲಾಗಿದೆ ಎಂದರು.

ಈ ಕುರಿತು ಸೂಕ್ತ ಕ್ರಮಕ್ಕೆ ಮುಂದಾಗ ಬೇಕಿದ್ದ ಸರ್ಕಾರ ಹಾಗೂ ಧ್ವನಿ ಎತ್ತಬೇಕಾಗಿದ್ದ ರಾಜಕೀಯ ಪಕ್ಷಗಳು ಮೌನ ವಹಿಸಿರುವುದು ಬೇಸರ ತರಿಸಿದೆ ಎಂದು ಪ್ರತಿಭಟನಾನಿರತರು ಹೇಳಿದರು.

ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮಕೈಗೊಳ್ಳುವ ಜತೆಗೆ, ಪ್ರತಿಮೆ ಮರು ಸ್ಥಾಪಿಸಲು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಎಡಿಸಿ ಇ.ಬಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದರು. ಸೇನೆ ಜಿಲ್ಲಾಧ್ಯಕ್ಷ ಟಿ.ಆನಂದ್, ರಘು, ರವಿ, ಜಗದೀಶ್, ರಾಜು, ಮಲ್ಲೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net