ಕಾಂಗ್ರೆಸ್ ಸರ್ಕಾರದಲ್ಲಿ ರಾಜೀನಾಮೆ ನೀಡುವ ಸ್ಥಿತಿ

New Bjp New
Published on

ಹುಬ್ಬಳ್ಳಿ : ಹಗರಣಗಳ ಸರಮಾಲೆಗಳನ್ನೇ ಹೊತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಇತರ ಸಚಿವರು ರಾಜೀನಾಮೆ ಕೊಡುವ ಸ್ಥಿತಿ ನಿಮಾಣವಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರರಾದ ಸುರಭಿ ಹೊದಿಗೆರೆ ವ್ಯಂಗ್ಯವಾಡಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ, ಮಹಿಳಾ ಹಾಗೂ ಹಿಂದು ವಿರೋಧಿ ಸರ್ಕಾರ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಸರ್ಕಾರ ಪಾತ್ರವಾಗಿದೆ ಎಂದು ಟೀಕಿಸಿದರು.

ಇಡಿ ಅಧಿಕಾರಿಗಳು ಸಲ್ಲಿಸಿರುವ ದೋಷಾರೋಪಣ ಪಟ್ಟಿಯಲ್ಲಿ ವಾಲ್ಮೀಕಿ ನಿಗಮದ ಹಣ ದುರುಪಯೋಗವಾದ ಬಗ್ಗೆ ಎಳೆ ಎಳೆಯಾಗಿ ದಾಖಲಾಗಿದೆ. ತಮ್ಮ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ, ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣದಲ್ಲಿ ಭಾಗಿಯಾಗಿರುವುದು ಮೇಲೊ್ನೕಟಕ್ಕೆ ಸಾಬೀತಾಗಿದೆ. ವಾಲ್ಮೀಕಿ ನಿಗಮದ ಹಣವನ್ನು ಚುನಾವಣೆಗೆ ಬಳಸಿಕೊಂಡಿರುವ ಬಗ್ಗೆ ಚಾರ್ಜ್​ಶೀಟ್​ನಲ್ಲಿ ನಮೂದಾಗಿದೆ. ಅಹಿಂದ ನಾಯಕ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅವರೇ ದಲಿತರ ಹಣಕ್ಕೆ ಕನ್ನ ಹಾಕಿದ್ದಾರೆ ಎಂಬುದನ್ನು ಜನ ಅರಿತುಕೊಳ್ಳಬೇಕು ಎಂದು ಹೇಳಿದರು.

ನಾಗಮಂಗಲ ಗಲಾಟೆ ಬಗ್ಗೆ ಸರ್ಕಾರ ಗಂಭೀರ ತನಿಖೆ ನಡೆಸಿ, ತಪ್ಪಿತಸ್ಥರನ್ನು ಬಂಧಿಸಬೇಕು. ಬಂಧಿತ ಅಮಾಯಕರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಭಾರತ ಸುರಕ್ಷಿತವಲ್ಲ ಎಂದು ವಿದೇಶದಲ್ಲಿ ಹೇಳಿಕೆ ನೀಡುವ ರಾಹುಲ್ ಗಾಂಧಿ, ಭಾರತದಲ್ಲೂ ಸುತ್ತಾಡಬೇಕು. ಅಂದಾಗ ಮಾತ್ರ ಯಾರಿಂದ ಅಸುರಕ್ಷತೆ ಎಂಬುದನ್ನು ತಿಳಿದುಕೊಳ್ಳಬಹುದು ಎಂದು ಗುಡುಗಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net