ಸೇವಾದಳ ಸದಸ್ಯರಿಗೆ ಸ್ಥಾನಮಾನ

CTD 03 Sevadala
Published on

ಚಿತ್ರದುರ್ಗ: ಸೇವಾದಳ ಶತಮಾನೋತ್ಸವ ಸಂಭ್ರಮಾಚರಣೆಗಾಗಿ ಡಿಸೆಂಬರ್ ತಿಂಗಳಲ್ಲಿ ಹುಬ್ಬಳ್ಳಿ ಅಥವಾ ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಸಲು ಚರ್ಚಿಸಲಾಗಿದೆ ಎಂದು ಕೆಪಿಸಿಸಿ ಸೇವಾದಳದ ಅಧ್ಯಕ್ಷ ಎಂ.ರಾಮಚಂದ್ರ ತಿಳಿಸಿದರು.

ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ನಿಗಮ ಮಂಡಳಿಗಳ ನೇಮಕಾತಿ ಸಂಬಂಧ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಮಟ್ಟದಲ್ಲಿ ಶ್ರಮಿಸಿದ ಸೇವಾದಳದವರಿಗೆ ಆದ್ಯತೆ ನೀಡುವ ಭರವಸೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿದ್ದಾರೆ ಎಂದರು.

ಎಐಸಿಸಿ ಸೂಚನೆ ಮೇರೆಗೆ ಸೇವಾದಳದ 3 ದಿನಗಳ ರಾಜ್ಯಮಟ್ಟದ ಕಾರ್ಯಾಗಾರವನ್ನು ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚಿತ್ರದುರ್ಗದಲ್ಲಿ ನಡೆಸಲಾಗುವುದು. ಅದಕ್ಕೆ ಈಗಿನಿಂದಲೇ ಸಿದ್ಧತೆ ಕೈಗೊಳ್ಳಿ ಎಂದು ಸಲಹೆ ನೀಡಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ, ವಿದ್ಯಾವಂತರನ್ನು ಸೇವಾದಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಳಿಸಬೇಕು. ಇಲ್ಲಿ ಕಾರ್ಯನಿರ್ವಹಿಸಿದರೆ ವಿಫುಲ ಅವಕಾಶಗಳಿವೆ ಎಂದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಸೇವಾದಳದ ಜಿಲ್ಲಾಧ್ಯಕ್ಷ ಭೂತೇಶ್, ಮಹಿಳಾ ಅಧ್ಯಕ್ಷೆ ಇಂದಿರಾ, ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್, ಕಾರ್ಯದರ್ಶಿ ಸೈಫುಲ್ಲಾ, ಜಂಟಿ ಕಾರ್ಯದರ್ಶಿ ರಾಧಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net