

ಬಾಳೆಹೊನ್ನೂರು: ವಿದ್ಯಾರ್ಥಿಗಳು, ಯುವಜನರು ಮಾದಕ ವಸ್ತುಗಳಿಂದ ದೂರವಿದ್ದಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯ ಎಂದು ಪಿಎಸ್‌ಐ ಅಭಿಷೇಕ್ ಹೇಳಿದರು.
ಎಸ್‌ಜೆಆರ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಮಾದಕ ವ್ಯಸನ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿ,
ಕಿರಿಯ ವಯಸ್ಸಿನಲ್ಲಿ ಮಾದಕ ವಸ್ತುಗಳಿಗೆ ದಾಸರಾದರೆ ಜೀವನಪೂರ್ತಿ ಅದಕ್ಕೆ ಹೊಂದಿಕೊಂಡು ಜೀವನವನ್ನೇ ಹಾಳು ಮಾಡಿಕೊಳ್ಳಬೇಕಾಗುತ್ತದೆ. ಸಮಾಜದಲ್ಲಿ ಗೌರವವೂ ದೊರೆಯುವುದಿಲ್ಲ. ಇದರಿಂದ ದುಷ್ಪರಿಣಾಮಗಳನ್ನೇ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರಾಚಾರ್ಯ ಕೆ.ಆರ್.ಬೂದೇಶ್ ಮಾತನಾಡಿ, ಮಾದಕ ವಸ್ತುಗಳ ಸೇವನೆಗೆ ಪ್ರಚೋದನೆ ನೀಡುವುದೂ ತಪ್ಪು. ವಿದ್ಯಾರ್ಥಿಗಳು ಓದಿನತ್ತ ಮಾತ್ರ ಗಮನಹರಿಸಬೇಕು ಎಂದರು.
ಮಾದಕ ವಸ್ತುಗಳ ಸೇವನೆ ವಿರುದ್ಧ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಎಎಸ್‌ಐ ಗಂಗ ಶೆಟ್ಟಿ, ಪ್ರೌಢಶಾಲೆ ಹಿರಿಯ ಶಿಕ್ಷಕ ಬಿ.ಎಸ್.ಕುಮಾರಚಂದ್ರ ನಾಯಕ್, ಉಪನ್ಯಾಸಕ ಕೆ.ಎಂ.ರಾಕೇಶ್ ಇತರರಿದ್ದರು.