ದುಶ್ಚಟಗಳಿಂದ ದೂರವಿರಿ

25 vikram 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ದೇಶ ನಿರ್ಮಾಣ ಕಾರ್ಯದಲ್ಲಿ ಯುವಕರ ಪಾತ್ರ ಬಹು ಮುಖ್ಯವಾಗಿದೆ. ಹೀಗಾಗಿ ಯುವಕರು ದುಶ್ಚಟದಿಂದ ದೂರವಿದ್ದು, ನವ ಸಮಾಜ ನಿರ್ಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು.
ನಗರದ ಮರಾಠಾ ವಿದ್ಯಾ ಪ್ರಸಾರಕ ಮಂಡಳದ ಭಾರತ ಪ್ರೌಢಶಾಲೆ, ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಪೊಲೀಸ್ ಅಭಿಯೋಗ ಸರ್ಕಾರಿ ವ್ಯಾಜ್ಯಗಳ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಮಂಡಳದಲ್ಲಿ ಸೋಮವಾರ ಆಯೋಜಿಸಿದ್ದ ಮಾದಕ ವಸ್ತುಗಳೆಂಬ ರಾಕ್ಷಸರಿಂದ ಮಕ್ಕಳು ಹಾಗೂ ಯುವ ಜನಾಂಗವನ್ನು ರಕ್ಷಿಸಿ ಎಂಬ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ಡಾ. ಮನೋಹರ ಕುಮಾರ, ಅಶೋಕ ಕೋರೆ ಮಾತನಾಡಿದರು. ಸಂಸ್ಥೆ ಉಪಾಧ್ಯಕ್ಷ ಯಲ್ಲಪ್ಪ ಚವ್ಹಾಣ ಅಧ್ಯಕ್ಷತೆ ವಹಿಸಿದ್ದರು. ಮಲ್ಲೇಶಪ್ಪ ಶಿಂಧೆ, ಸುನೀಲ ಮೋರೆ, ಮೀನಾಕ್ಷಿ ಘಾಟಿಗೆ, ಶೈಲಶ್ರೀ ಸಂಕೋಜಿ, ವಿದ್ಯಾರ್ಥಿಗಳು, ಮಂಡಳದ ಪದಾಧಿಕಾರಿಗಳು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net