ಸುದ್ದಿ ಪ್ರಕಟಿಸದಂತೆ ಪ್ರತಿಬಂಧಕಾಜ್ಞೆ ತಂದ ಮುರುಘಾ ಶರಣರು; ಶ್ರೀಗಳ ಯಾವುದೇ ಸುದ್ದಿ ಪ್ರಕಟಿಸದಿರಲು ವಿಜಯವಾಣಿ ನಿರ್ಧಾರ

Murugha
Published on

ಚಿತ್ರದುರ್ಗ: ಪೋಕ್ಸೋ, ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ತಮ್ಮ ಕುರಿತ ಸುದ್ದಿಗಳನ್ನು ಪ್ರಕಟಿಸದಂತೆ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆಯನ್ನು ಪಡೆದಿದ್ದಾರೆ. ಹೀಗಾಗಿ ವಿಜಯವಾಣಿ ಇಂದಿನಿಂದ ಮುರುಘಾ ಶರಣರ ಪರ ಅಥವಾ ವಿರುದ್ಧವಾದ ಯಾವುದೇ ಸುದ್ದಿಯನ್ನು ಪ್ರಕಟಿಸುವುದಿಲ್ಲ. ಈ ಹಿಂದೆಯೂ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆ ತಂದಿರುವ ಹಲವು ಗಣ್ಯರು, ಶಾಸಕರು, ಅಧಿಕಾರಿಗಳು ಪ್ರಭಾವಿ ರಾಜಕಾರಣಿಗಳ ಕುರಿತ ಯಾವುದೇ ಸುದ್ದಿಗಳನ್ನು ವಿಜಯವಾಣಿ ಪ್ರಕಟ ಮಾಡುತ್ತಿಲ್ಲ.

ಶ್ರೀಗಳಿಗೆ ನ್ಯಾಯಾಂಗ ಬಂಧನ: ಸೆ.14ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಹೀಗಾಗಿ ಪೊಲೀಸರು ಶ್ರೀಗಳನ್ನು ಕಾರಾಗೃಹಕ್ಕೆ ಕರೆದೊಯ್ದರು. ಆರೋಪಿಗಳ ಜಾಮೀನು ಅರ್ಜಿಗಳ ವಿಚಾರಣೆ ಸೆ.7ಕ್ಕೆ ನಿಗದಿಯಾಗಿದೆ. ಪ್ರಸ್ತುತ ನ್ಯಾಯಾಂಗ ವಶದಲ್ಲಿರುವ 2ನೇ ಆರೋಪಿ ರಶ್ಮಿಯನ್ನು ವಿಚಾರಣೆಗೆ ಒಳಪಡಿಸಲು ವಶಕ್ಕೆ ನೀಡುವಂತೆ ಪೊಲೀಸರು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net