ಮಹಿಳೆಯ ಸರ ಕಳವು

FotoJet (2)
Published on

ಬಾಗೇಪಲ್ಲಿ: ತಾಲೂಕಿನ ದೇವರಗುಡಿಪಲ್ಲಿಯ ಶ್ರೀ ಕ್ಷೇತ್ರ ಗಡಿದಂ ಲಕ್ಷ್ಮೀವೆಂಕಟರಮಣ ಸ್ವಾಮಿ ದೇವಾಲಯದ ಬಳಿ ಸೋಮವಾರ ಮಧ್ಯಾಹ್ನ ಮಹಿಳೆ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿ ಚಿನ್ನದ ಸರ ಕಸಿದಿದ್ದಾರೆ. ಬಾಗೇಪಲ್ಲಿ ತಾಲೂಕಿನ ಗಡಿದಂ ಗ್ರಾಮದ ಅನಸೂಯಮ್ಮ(52) ಹಲ್ಲೆಗೊಳಗಾಗಿ ಸರ ಕಳೆದುಕೊಂಡವರು. ದೇವಾಲಯದ ಬಳಿ ಚಿಲ್ಲರೆ ವ್ಯಾಪಾರ ನಡೆಸುತ್ತಿದ್ದ ಅವರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಹಲ್ಲೆ ನಡೆಸಿ, ಕತ್ತಿನಲ್ಲಿದ್ದ 30 ಗ್ರಾಂ ತೂಕದ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದಾರೆ. ಬಾಗೇಪಲ್ಲಿ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net