

ಮದ್ದೂರು: ಶಾಸಕ ಕೆ.ಎಂ.ಉದಯ್ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸರ್ಕಾರದ ಮಟ್ಟದಲ್ಲಿ ನಿರಂತರವಾಗಿ ಹೋರಾಟ ಮಾಡಿ ಎರಡೇ ವರ್ಷದಲ್ಲಿ ಒಂದು ಸಾವಿರ ಕೋಟಿ ರೂ.ಗೂ ಅಧಿಕ ಅನುದಾನ ತಂದು ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದಾರೆ. ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು ಮೆಚ್ಚುಗೆ ವ್ಯಕ್ತಪಡಿಸಿದರು.
ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಶಾಸಕ ಕೆ.ಎಂ.ಉದಯ್ ಅವರ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿ ಮಾತನಾಡಿದರು.
ಶಾಸಕ ಕೆ.ಎಂ.ಉದಯ್ ಅವರು ಶಾಸಕರಾದ ಕೇವಲ ಎರಡೇ ವರ್ಷದಲ್ಲಿ ಮದ್ದೂರು ಪಟ್ಟಣವನ್ನು ನಗರಸಭೆಯನ್ನಾಗಿ ಮಾಡಲು ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದುಕೊಂಡಿದ್ದಾರೆ. ಪಟ್ಟಣದ ಕೆಮ್ಮಣ್ಣುನಾಲೆಯನ್ನು 90 ಕೋಟಿ ರೂ. ವೆಚ್ಚದಲ್ಲಿ ಆಧುನಿಕರಣ ಮಾಡಲು ಭೂಮಿ ಪೂಜೆ ಮಾಡಿದ್ದಾರೆ. ಪಟ್ಣಣದ ಪೇಟೆಬೀದಿಯನ್ನು ವಿಸ್ತರಣೆ ಮಾಡುವ ಸಂಬಂಧ ಬಜೆಟ್‌ನಲ್ಲಿ ಪ್ರಸ್ತಾಪವಾಗುವಂತೆ ಮಾಡಿದ್ದಾರೆ. ತಾಲೂಕಿನ ನೀರಾವರಿ ಯೋಜನೆಗಳಿಗೆ ವಿಶೇಷ ಅನುದಾನ ತಂದಿದ್ದಾರೆ. ಜತೆಗ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ಶಾಸಕ ಕೆ.ಎಂ.ಉದಯ್ ಅವರು ಕೆ.ಎಂ.ಉದಯ್ ಚಾರಿಟಬಲ್ ಟ್ರಸ್ಟ್ ಮೂಲಕ ಹಲವಾರು ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದವರಿಗೆ ಆಸರೆಯಾಗಿದ್ದಾರೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಟ್ರಸ್ಟ್ ವತಿಯಿಂದ ಸ್ವಂತ ಹಣದಲ್ಲಿ ಶಾಲಾ ಶುಲ್ಕ ಕಟ್ಟುವುದು, ಉಚಿತವಾಗಿ ಶಾಲಾ ಬ್ಯಾಗ್, ನೋಟ್ ಬುಕ್, ಜಾಮಿಟ್ರಿ ಬಾಕ್ಸ್‌ಗಳನ್ನು ವಿತರಿಸುವ ಮೂಲಕ ವಿದ್ಯಾರ್ಥಿಗಳ ಮಿತ್ರ ಎನಿಸಿಕೊಂಡಿದ್ದಾರೆ ಎಂದು ಪ್ರಶಂಸಿಸಿದರು.
------------------