ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಕ್ರಮ

Steps taken to improve SSLC results
ಕಲಾದಗಿಯ ಹಣ್ಣು ಬೆಳೆಗಾರರ ವಿದ್ಯಾ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಡಿಡಿಪಿಐ ಅಜಿತ ಮನ್ನಿಕೇರಿ ಬೋಧನೆ ಮಾಡಿದರು.
Published on

ಕಲಾದಗಿ: ಪ್ರಸಕ್ತ ಸಾಲಿನಲ್ಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಗತಿಗಾಗಿ ಅನೇಕ ಹೊಸ ಕಲಿಕಾ ವಿಧಾನಗಳನ್ನು ರೂಢಿಸಲಾಗಿದ್ದು, ಬರುವ ದಿನಗಳಲ್ಲಿ ಸಂಪನ್ಮೂಲ ಶಿಕ್ಷಕರ ತಂಡ ರಚಿಸಿ, ವಿಶೇಷ ತರಗತಿ, ಮಕ್ಕಳ ಕಲಿಕೆಗೆ ಪ್ರೇರಣೆ ನೀಡಲು ವಿಶೇಷ ಕಾರ್ಯಾಗಾರ ನಡೆಸುವ ಯೋಚನೆ ಇದೆ ಎಂದು ಬಾಗಲಕೋಟೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಅಜಿತ ಮನ್ನಿಕೇರಿ ಹೇಳಿದರು.

ರಜೆಯ ದಿನದಲ್ಲಿ ಎಸ್ಸೆಸ್ಸೆಎಲ್ಸಿ ವಿಧ್ಯಾರ್ಥಿಗಳಿಗಾಗಿ ಹೆಚ್ಚುವರಿ ವಿಶೇಷ ತರಗತಿಗಳು ನಡೆಯುತ್ತಿರುವುದನ್ನು ಪರಿಶೀಲಿಸಲು ಗ್ರಾಮದ ಹಣ್ಣು ಬೆಳೆಗಾರರ ವಿದ್ಯಾ ಸಂಸ್ಥೆಗೆ ದಿಢೀರ್ ಭೇಟಿ ನೀಡಿ ವಿಶೇಷ ತರಗತಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಆಧರಿಸಿ, ಅವರ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಅವರಿಗೆ ಪ್ರತ್ಯೇಕವಾಗಿ ತಗರತಿಗಳನ್ನು ಈಗಾಗಲೇ ತೆಗೆದುಕೊಳ್ಳಲಾಗುತ್ತಿದೆ. ಕಡಿಮೆ ಅಂಕ ತೆಗೆದುಕೊಂಡಿರುವ ಮಕ್ಕಳ ಮನೆಗೆ ಭೇಟಿ ಹಾಗೂ ಪಾಲಕರ ಜೊತೆ ಶೈಕ್ಷಣಿಕ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಚರ್ಚೆ ಸೇರಿ ಲಿತಾಂಶ ಹೆಚ್ಚಳಕ್ಕಾಗಿ ಜಿಲ್ಲೆಯ ಎಲ್ಲ ಮುಖ್ಯೋಪಾಧ್ಯಾಯರು ಹಾಗೂ ಜಿಲ್ಲಾ ಪಂಚಾಯಿತಿ ಆಯುಕ್ತರ ಮೂಲಕ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳುವ ಯೋಜನೆ ಸಿದ್ಧವಾಗುತ್ತಿದೆ ಎಂದರು.

ರಾಜ್ಯದಲ್ಲಿ ಜಿಲ್ಲೆಯ ಲಿತಾಂಶ ಕಳೆದ ಬಾರಿಗಿಂತ ಈ ಸಾರಿ ಅತ್ಯುತ್ತಮ ಶ್ರೇಣಿಯಲ್ಲಿರುವಂತೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಅಗತ್ಯ ರೀತಿಯ ಕಲಿಕಾ ಬೊಧನೆಗಳನ್ನು, ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದ ಅವರು, ಈ ಬಾರಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಲಿತಾಂಶ ಅತ್ಯುತ್ತಮವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net