

ಸಕಲೇಶಪುರ: ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟ ಮಕ್ಕಳ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಲಾಗುವುದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ತಾಲೂಕಿನ ಹಲಸುಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕೃಷಿಹೊಂಡದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕರ ಮನೆಗಳಿಗೆ ಭೇಟಿ ನೀಡಿ ವೈಯಕ್ತಿಕ ಪರಿಹಾರ ನೀಡಿದ ನಂತರ ಮಾತನಾಡಿದ ಅವರು, ಬಾಲಕರು ಆಟವಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಬೇಸರದ ಸಂಗತಿ. ಮಕ್ಕಳ ಪಾಲಕರು ಕೂಲಿ ಕಾರ್ಮಿಕರಾಗಿದ್ದು ಅತ್ಯಂತ ಬಡವರಾಗಿದ್ದಾರೆ. ಈ ನಿಟ್ಟಿನಲ್ಲಿ ನಾನು ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸ್ಥಳದಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಜಿಲ್ಲಾಧಿಕಾರಿ ಲತಾ ಕುಮಾರಿ ಅವರಿಗೆ ದೂರವಾಣಿ ಮುಖಾಂತರ ಮಾತನಾಡಿ ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು.