ಕಾಲೇಜು ನೌಕರರ ಸಮಸ್ಯೆ ನಿವಾರಣೆಗೆ ಕ್ರಮ

21KMD-1
ಕೆ.ಎಂ.ದೊಡ್ಡಿಯ ಭಾರತೀ ಎಜುಕೇಷನ್ ಟ್ರಸ್ಟ್‌ನ ಆಡಳಿತ ಕಚೇರಿಯಲ್ಲಿ ಮಂಡ್ಯ ಜಿಲ್ಲೆ ಸರ್ಕಾರಿ ಸಂಘದ ಚುನಾವಣೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಆಡಳಿತ ಕಚೇರಿಯ ನೌಕರರಿಂದ ನಿರ್ದೇಶಕರಾಗಿ ಆಯ್ಕೆಯಾಗಿರುವ ಎಂ.ಎಲ್. ಕೃಷ್ಣೇಗೌಡ ಅವರ ತಂಡದಿಂದ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರನ್ನು ಅಭಿನಂದಿಸಲಾಯಿತು.
Published on

ಕೆ.ಎಂ.ದೊಡ್ಡಿ: ಕಾಲೇಜು ವಿಭಾಗದ ನೌಕರರ ಸಮಸ್ಯೆಗಳಿಗೆ ಸರ್ಕಾರ ಮಟ್ಟದಲ್ಲಿ ಚರ್ಚಿಸಿ ಅಗತ್ಯ ಕ್ರಮ ವಹಿಸುವುದಾಗಿ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಭರವಸೆ ನೀಡಿದರು.

ಭಾರತೀ ಎಜುಕೇಷನ್ ಟ್ರಸ್ಟ್‌ನ ಆಡಳಿತ ಕಚೇರಿಯಲ್ಲಿ ಮಂಡ್ಯ ಜಿಲ್ಲೆ ಸರ್ಕಾರಿ ಸಂಘದ ಚುನಾವಣೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಆಡಳಿತ ಕಚೇರಿಯ ನೌಕರರಿಂದ ನಿರ್ದೇಶಕರಾಗಿ ಆಯ್ಕೆಯಾಗಿರುವ ಎಂ.ಎಲ್. ಕೃಷ್ಣೇಗೌಡ ಅವರ ತಂಡದಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಸರ್ಕಾರಿ ಕಾಲೇಜು ವಿಭಾಗದ ಉಪನ್ಯಾಸಕರು ಮತ್ತು ನೌಕರರ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಶ್ರಮಿಸುವುದಾಗಿ ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾಗಿರುವ ಎಂ.ಎಲ್.ಕೃಷ್ಣೇಗೌಡ ಅವರು ಸಂಘದ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಬೇಡಿಕೆಗಳ ಈಡೇರಿಕೆಗೆ ಶ್ರಮಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಮಂಡ್ಯ ಜಿಲ್ಲಾ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಮಂಜೇಶ್‌ಕುಮಾರ್, ಪ್ರಾಂಶುಪಾಲರ ಸಂಘದ ಅಧ್ಯಕ್ಷ ನಟರಾಜು, ಪ್ರಧಾನ ಕಾರ್ಯದರ್ಶಿ ಕಾಂತರಾಜು, ಚಂದೂಪುರ ಪದವಿ ಪೂರ್ವ ಕಾಲೇಜಿನ ಪಾಂಶುಪಾಲ ಹನುಮಂತರಾಯಪ್ಪ, ಎಸ್.ಸುದೀಪ್ ಕುಮಾರ್, ಅಂಕೇಗೌಡ, ಮೆಳ್ಳಹಳ್ಳಿ ಜವರಾಯಿ, ಅರುಣ್, ಕರಡಕೆರೆ ಶಿವಲಿಂಗೇಗೌಡ, ಗೌಡಯ್ಯನದೊಡ್ಡಿ ಯೋಗೇಶ್ ಸೇರಿದಂತೆ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net