

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇದೇ ಸೆ. ೨೯ರಂದು ನಡೆಯಲಿರುವ ಕನ್ನಡ ಭಾಷಾ ಪರೀಕ್ಷೆಯನ್ನು ಯಶಸ್ವಿಯಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿAದು ಶುಕ್ರವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಭಾಷಾ ಪರೀಕ್ಷೆಯ ಪೂರ್ವ ಸಿದ್ದತೆ ಕುರಿತು ಅಧಿಕಾರಿಗಳ ಸಭೆ ನಡೆಸಿದ ಅವರು, ಕಂದಾಯ ಇಲಾಖೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ಸೇರಿ ಒಟ್ಟು ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇರ ನೇಮಕಾತಿ ಸಂಬAಧ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಸೆ. ೨೯ರಂದು ನಡೆಯಲಿದೆ. ಚಿಕ್ಕಮಗಳೂರು, ಕಡೂರಿನಲ್ಲಿ ಒಟ್ಟು ೨೧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ ೮,೮೦೦ ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.
ಪರೀಕ್ಷೆ ನಡೆಯುವ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಕಾಲೇಜು ಪ್ರಾಚಾರ್ಯರು, ಉಪನ್ಯಾಸಕರನ್ನು ಪರೀಕ್ಷೆ ನಡೆಯುವ ಕೆಂದ್ರಗಳಿಗೆ ಮೇಲುಸ್ತುವಾರಿ ಹಾಗೂ ಶಿಸ್ತುಬದ್ದವಾಗಿ ಪರೀಕ್ಷೆ ನಡೆಸಲು ನೇಮಕ ಮಾಡಲಾಗಿದೆ. ನೇಮಕವಾಗಿರುವ ಅಧಿಕಾರಿಗಳು ನಿಗಧಿತ ಸಮಯದಲ್ಲಿ ಹಾಜರಿದ್ದು ಸರ್ಕಾರದ ನಿರ್ದೇಶನಗಳನ್ನು ಪಾಲಿಸಿ ಯಾವುದೇ ಸಮಸ್ಯೆಗಳಾಗದಂತೆ ಜಾಗೃತಿ ವಹಿಸಿ ತಮ್ಮ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು ಎಂದರು.
ಪರೀಕ್ಷಾ ಪ್ರಾಧಿಕಾರದ ನಿಯಮಗಳನುಸಾರ ಎಲ್ಲ ಕ್ರಮಗಳನ್ನು ಕೈಗೊಂಡು ಯಶಸ್ವಿಯಾಗಿ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಎಎಸ್‌ಪಿ ಕೃಷ್ಣಮೂರ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟನಾಯ್ಕ, ಡಿಡಿಪಿಐ ಪುಟ್ಟರಾಜು, ಬಿಇಒ ರವೀಶ್ ಮತ್ತಿತರರಿದ್ದರು.