ಆದ್ಯತಾ ಪಡಿತರ ಚೀಟಿ ನೀಡಲು ಕ್ರಮ

rationcard
Published on

ಪಡುಬಿದ್ರಿ: ಹೊಸ ಆದ್ಯತಾ ಪಡಿತರ ಚೀಟಿ ಕೋರಿ ಮಾ.23ರವರೆಗೆ 2,95,986 ಅರ್ಜಿ ವಿಲೇವಾರಿಗೊಳಿಸಿದ್ದು, ತುರ್ತು ವೈದ್ಯಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಅರ್ಹರಿಗೆ ಆದ್ಯತಾ ಪಡಿತರ ಚೀಟಿ ನೀಡಲಾಗುವುದು ಹಾಗೂ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಪಡೆಯಲು ಆನ್ ಲೈನ್ ಅರ್ಜಿ ಸಲ್ಲಿಸಲು ಇರುವ ತಾಂತ್ರಿಕ ತೊಡಕುಗಳ ಬಗ್ಗೆ ಹಾಗೂ ಹೊಸದಾಗಿ ಪಡಿತರ ಚೀಟಿ ಯಾವ ಕಾಲಮಿತಿಯಲ್ಲಿ ನೀಡಲಾಗುವುದು ಎಂಬ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇ-ಶ್ರಮ ನೋಂದಾಯಿತ ಕಾರ್ಮಿಕರಿಗೆ, ಬಡಕಟ್ಟು ಜನಾಂಗದವರಿಗೆ ಹೊಸ ಪಡಿತರ ಚೀಟಿ ನೀಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿಗೆ ಹಂತ ಹಂತವಾಗಿ ಅನುಮೋದನೆ ನೀಡಲಾಗುತ್ತಿದೆ ಎಂದರು.

ತಾಲೂಕುಗಳಲ್ಲಿ ಆರೋಗ್ಯಾಧಿಕಾರಿಗಳ ಹುದ್ದೆ ಸೃಜಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ರಾಜ್ಯದಲ್ಲಿ 2017-18 ಮತ್ತು 2019-20ನೇ ಸಾಲಿನಲ್ಲಿ 62 ಹೊಸ ತಾಲೂಕು ರಚಿಸಲಾಗಿದೆ. ಕಾಪು ತಾಲೂಕನ್ನು ಒಳಗೊಂಡಂತೆ 62 ತಾಲೂಕುಗಳಲ್ಲಿ ಆರೋಗ್ಯಾಧಿಕಾರಿಗಳ ಹುದ್ದೆ ಸೃಜಿಸುವ ಪ್ರಸ್ತಾವನೆ ಹಾಗೂ ಆರೋಗ್ಯಾಧಿಕಾರಿಗಳ ಕಚೇರಿಗೆ ವೃಂದ ಬಲ ಮಂಜೂರು ಮಾಡಲು ಆರ್ಥಿಕ ಇಲಾಖೆ ಸಹಮತಿ ಕೇಳಲಾಗಿದ್ದು, ಸಹಮತಿ ಸಿಕ್ಕ ಕೂಡಲೇ ಕ್ರಮ ಕೈಗೊಳ್ಳಗಾವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ದಿನೇಶ್ ಗುಂಡೂರಾವ್‌ರವರು ಸುರೇಶ್ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net