ಸಿಲಿಕಾನ್​ ಸಿಟಿಯಲ್ಲಿ ಕನ್ನಡ ಭಾಷೆ ಉಳಿವಿಗೆ ಕ್ರಮ: ಬಿಬಿಎಂಪಿ ಮುಖ್ಯ ಆಡಳಿತಾಧಿಕಾರಿ ಹೇಳಿಕೆ

BBMP kannada
Published on

ಬೆಂಗಳೂರು: ದೇಶದ ಪ್ರಮುಖ ನಗರವಾದ ಸಿಲಿಕಾನ್​ ಸಿಟಿಯಲ್ಲಿ ಕನ್ನಡ ಭಾಷೆಯನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಿದ್ದೇವೆ ಬಿಬಿಎಂಪಿ ಮುಖ್ಯ ಆಡಳಿತಾಧಿಕಾರಿ ಎಸ್​.ಆರ್​. ಉಮಾಶಂಕರ್​ ಹೇಳಿದ್ದಾರೆ.

ಬಿಬಿಎಂಪಿ ನೌಕರರ ಕನ್ನಡ ಸಂಘ ಸಹಯೋಗದಲ್ಲಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ, ಪಾಲಿಕೆ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ "ಕನ್ನಡ ರಾಜ್ಯೋತ್ಸವ' ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದ ಹೆಮ್ಮೆಯ ನಗರ ಬೆಂಗಳೂರು.ಭಾಷೆಯನ್ನು ಉಳಿಸಿ ಬೆಳಸಲು ಬಿಬಿಎಂಪಿ ಮುಂದಾಗಿದೆ. ಕನ್ನಡ ಆಡಳಿತ ಭಾಷೆಯಾಗಿದ್ದು, ರಾಜ್ಯದ ಆರೂವರೆ ಕೋಟಿ ಜನರ ಮನದಾಳದ ಭಾಷೆ ಇದಾಗಿದೆ. ನಮ್ಮ ಭಾಷೆಗೆ 8 ಜ್ಷಾನಪೀಠ ಪ್ರಶಸ್ತಿ ಲಭಿಸಿರುವುದು ಗಮನಾರ್ಹ. ಸಿಲಿಕಾನ್​ ಸಿಟಿಯಲ್ಲಿ ಕನ್ನಡ ಬಳಕೆ ಕಡಿಮೆ ಇದ್ದರೂ ಗ್ರಾಮೀಣಾ ಭಾಗದಲ್ಲಿ ಹೆಚ್ಚು ಜನರು ಬಳಸುತ್ತಿದ್ದಾರೆ ಎಂದರು.

ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ ಮಾಡಲಾಗಿದೆ. ವಿಶೇಷವಾಗಿ ಈ ವರ್ಷ ವಿಜೃಂಭಣೆಯಿಂದ ರಾಜ್ಯೋತ್ಸವ ಅಚರಿಸಲಾಗುತ್ತಿದೆ. ಐಟಿ-ಬಿಟಿ ಕಂಪನಿಗಳಲ್ಲಿ ಹಾಗೂ ವಾಣಿಜ್ಯ ಮಳಿಗೆಯಲ್ಲಿ ಕನ್ನಡ ಬಾವುಟ ಪ್ರದರ್ಶನ ಮಾಡಬೇಕೆಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಕಟ್ಟಪ್ಪಣೆ ಮಾಡಿದ್ದಾರೆ. ಪಾಲಿಕೆಯಲ್ಲಿ ಸಂಪೂರ್ಣ ಆಡಳಿತ ವ್ಯವಹಾರವನ್ನು ಕನ್ನಡದಲ್ಲೇ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಹೇಳಿದರು.

ಉತ್ತರಾಖಂಡದ ಹರಿದ್ವಾರ ಮತ್ತು ಋಷಿಕೇಶದ ಗಂಗಾ ನದಿ ತೀರದಲ್ಲಿ ನ.16ರಂದು ನಡೆಯುವ ರಾಷ್ಟ್ರೀಯ ಮಟ್ಟದ ಕರ್ನಾಟಕ ರಾಜ್ಯೋತ್ಸವ ಸಮಾರಂಭದ ಲಾಂಛನ ಮತ್ತು ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು. ಸಂದ ಪದಾಧಿಕಾರಿಗಳಾದ ಬಾಬಣ್ಣ, ಡಾ.ಶೋಭಾ, ಡಿ.ರಾಮಚಂದ್ರ, ಕೆ.ಜಿ.ರವಿ ಮತ್ತಿತರರಿದ್ದರು.

ಕನ್ನಡ ವಿಶ್ವ ಭಾಷೆಯಾಗಬೇಕೆಂಬ ನಿಟ್ಟಿನಲ್ಲಿ ನ.16ರಂದು ಉತ್ತರಾಖಂಡದಲ್ಲಿ ಅದ್ದೂರಿಯಾಗಿ ರಾಜ್ಯೋತ್ಸವ ಹಮ್ಮಿಕೊಂಡಿದ್ದೇವೆ. ಹಿಂದೆ ನೇಪಾಳ, ಕಾಶಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗಿತ್ತು. ನಾಡಿನ ಕಲೆ, ಸಾಹಿತ್ಯ, ಸಂಸತಿಯನ್ನು ಹೊರ ರಾಜ್ಯ ಮತ್ತು ರಾಷ್ಟ್ರಗಳಿಗೆ ಪರಿಚಯಿಸುವ ಕೆಲಸ ಮಾಡುತ್ತಿದ್ದೇವೆ. ಕನ್ನಡೇತರಿಗೆ ನಾಡಿನ ಪರಿಚಯ, ಕನ್ನಡ ಕಲಿಸುತ್ತಿದ್ದೇವೆ.

| ಎ. ಅಮೃತ್​ರಾಜ್​. ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net