ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಕ್ರಮ

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಗಣೇಶ್ ಪ್ರಸಾದ್ ಸೋಲಾರ್ ದೀಪಗಳನ್ನು ವಿತರಣೆ ಮಾಡಿದರು. ಕಾವ್ಯಾ, ಮಂಜುಳಾ, ಶಿವಕುಮಾರ್ ಎಚ್.ಎನ್.ಬಸವರಾಜು, ಸ್ವಾಮಿ ಇದ್ದರು.
ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಗಣೇಶ್ ಪ್ರಸಾದ್ ಸೋಲಾರ್ ದೀಪಗಳನ್ನು ವಿತರಣೆ ಮಾಡಿದರು. ಕಾವ್ಯಾ, ಮಂಜುಳಾ, ಶಿವಕುಮಾರ್ ಎಚ್.ಎನ್.ಬಸವರಾಜು, ಸ್ವಾಮಿ ಇದ್ದರು.
Published on

ಗುಂಡ್ಲುಪೇಟೆ: ಗ್ರಾಮಾಂತರ ಪ್ರದೇಶಗಳು ಹಾಗೂ ಪಂಪ್ ಸೆಟ್‌ಗಳಿಗೆ ಆಗುತ್ತಿದ್ದ ವಿದ್ಯುತ್ ಕೊರತೆ ಪರಿಹರಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಬುಧವಾರ ಗ್ರಾಮಪಂಚಾಯಿತಿ ವತಿಯಿಂದ 80 ಫಲಾನುಭವಿಗಳಿಗೆ ಸೋಲಾರ್ ದೀಪಗಳನ್ನು ವಿತರಿಸಿ ಮಾತನಾಡಿದರು.

ಬಂಡೀಪುರ ಕಾಡಂಚಿನ ತಾಲೂಕಿನ ಮಂಗಲ ಗ್ರಾಮಕ್ಕೆ ನಿರಂತರ ಜ್ಯೋತಿ ಸಂಪರ್ಕ ನೀಡಲಾಗಿದ್ದು, ಈ ಭಾಗದ ಜನರ ಆಶೋತ್ತರ ಈಡೇರಿಸಲಾಗಿದೆ. ಉಚಿತ ವಿದ್ಯುತ್ ಪೂರೈಕೆ ಜತೆಗೆ ನಿರಂತರ ವಿದ್ಯುತ್ ಪೂರೈಕೆ ಹಾಗೂ ಕೃಷಿ ಪಂಪ್‌ಸೆಟ್‌ಗಳಿಗೂ ಸಮರ್ಪಕ ವಿದ್ಯುತ್ ಸರಬರಾಜಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾವ್ಯಾ, ಉಪಾಧ್ಯಕ್ಷೆ ಮಂಜುಳಾ, ಮಾಜಿ ಅಧ್ಯಕ್ಷ ಶಿವಕುಮಾರ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಮುಖಂಡ ಸ್ವಾಮಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net