ದಾಸ್ತಾನು ಕೊಠಡಿಗೆ ಬೆಂಕಿ ತಗುಲಿ ಹಾನಿ

damage
Published on

ಸಿದ್ದಾಪುರ: ರೈತರೊಬ್ಬರ ದಾಸ್ತಾನು ಕೊಠಡಿಗೆ ಬೆಂಕಿ ತಗುಲಿದ ಪರಿಣಾಮ ಅಡಕೆ-ಕಾಳುಮೆಣಸು ಮತ್ತಿತರ ವಸ್ತುಗಳು ಸುಟ್ಟು ಕರಕಲಾದ ಘಟನೆ ತಾಲೂಕಿನ ಹರಕನಳ್ಳಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

ರಾಮಕೃಷ್ಣ ಕೆರಿಯಾ ನಾಯ್ಕ ಎಂಬುವರ ಮನೆಯ ದಾಸ್ತಾನು ಕೊಠಡಿಗೆ ಏಕಾಏಕಿ ಬೆಂಕಿ ತಗುಲಿ ಸುಟ್ಟು ಕರಕಲಾಗಿದೆ. ಅಡಕೆ, ಕಾಳುಮೆಣಸು, ಅಡಕೆ ಬೇಯಿಸುವ ಹಂಡೆ, ಬುಟ್ಟಿ, ಕಲ್ಲಿ ಮತ್ತಿತರ ವಸ್ತುಗಳು ಸಂಪೂರ್ಣ ಭಸ್ಮವಾಗಿದ್ದು, ಕುಟುಂಬ ನಿರ್ವಹಣೆಗೆ ಪರದಾಡುವ ಸ್ಥಿತಿ ಉದ್ಭವವಾಗಿದೆ.

ಬೆಂಕಿ ಅನಾಹುತದಿಂದ ಅಡಕೆ ಮತ್ತಿತರ ಬೆಲೆಬಾಳುವ ವಸ್ತುಗಳು ಹಾನಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ವಿಷಯ ತಿಳಿದು ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಬಂಧಪಟ್ಟ ಆಡಳಿತ ಈ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net