ಮೈಸೂರು: ಕಲ್ಯಾಣ ಮಂಟಪದಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ 4.75 ಲಕ್ಷ ರೂ. ಮೌಲ್ಯದ ಆಭರಣ ವಶಪಡಿಸಿಕೊಂಡಿದ್ದಾರೆ.
ಸಿದ್ದಾರ್ಥ ನಗರ ವಿನಯ ಮಾರ್ಗದಲ್ಲಿರುವ ಕನಕ ಭವನ ಛತ್ರದಲ್ಲಿ ಮಹಿಳೆಯೊಬ್ಬರು ವ್ಯಾನಿಟಿ ಬ್ಯಾಗ್‌ನಲ್ಲಿಟ್ಟಿದ್ದ ಚಿನ್ನದ ಆಭರಣಗಳು ಮೇ 31 ರಂದು ಕಳ್ಳತನವಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ನಜರ್‌ಬಾದ್ ಠಾಣೆ ಪೊಲೀಸರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದು, ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ನೇತೃತ್ವದಲ್ಲಿ ನಜರ್‌ಬಾದ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಂ. ಮಹದೇವಸ್ವಾಮಿ, ಸಬ್ ಇನ್ಸ್‌ಪೆಕ್ಟರ್ ಶ್ರೀನಿವಾಸ್ ಪಾಟೀಲ್, ಸಿಬ್ಬಂದಿ ಬಿ.ವಿ.ಪ್ರಕಾಶ್, ಎಸ್.ಸತೀಶ್‌ಕುಮಾರ್, ಕಿರಣ್ ರಾಥೋಡ್, ಮಲ್ಲಿಕಾರ್ಜುನ, ಸಂಜು, ಸಿಡಿಆರ್ ಘಟಕದ ಪಿ.ಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.