ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ

Crime Logo
Published on

ಹಿರೇಕೆರೂರ: ಹೊಟ್ಟೆ ನೋವು ತಾಳಲಾರದೆ ವೃದ್ಧೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.
ಗೌರಮ್ಮ ಗೋಣಿರುದ್ರಪ್ಪ ವಗ್ಗರಣೆ (60) ಮೃತ ವೃದ್ಧೆ.
ಇವರಿಗೆ 15 ದಿನದಿಂದ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಂಸಬಾವಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net