ಹೊಟ್ಟೆನೋವು ತಾಳಲಾರದೆ ಮಹಿಳೆ ಆತ್ಮಹತ್ಯೆ

crime logo
Published on

ಹಾನಗಲ್ಲ: ಹೊಟ್ಟೆನೋವು ತಾಳಲಾರದೆ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯತ್ತಿನಹಳ್ಳಿಯಲ್ಲಿ ಭಾನುವಾರ ನಡೆದಿದೆ.

ಜಯಮ್ಮ ತಿಪ್ಪಣ್ಣ ಹರಿಜನ (55) ಮೃತ ಮಹಿಳೆ.

ಇವರು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net