

ಸವಣೂರ: ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ಮರಕ್ಕೆ ನೇಣು ಬಿಇಗಿದಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಂತ್ರೋಡಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಉಜನೇಶ ಶಂಕ್ರಪ್ಪ ಬೂದನವರ (24) ಮೃತ ಯುವಕ.
ಈತ ಒಂದೂವರೆ ವರ್ಷದಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ. ಇದರಿಂದ ಮನನೊಂದು ಜಮೀನುವೊಂದರಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.