ಹೊಟ್ಟೆನೋವಿನಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ

Crime Logo
Published on

ಸವಣೂರ: ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆಯಿಂದ ಆಗಾಗ ಬರುತ್ತಿದ್ದ ನೋವು ತಾಳಲಾರದೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೇವಿನಹಳ್ಳಿ ಬುಧವಾರ ಸಂಭವಿಸಿದೆ.
ಕವಿತಾ ನಿಂಗಪ್ಪ ಹರಿಜನ (21) ಮೃತ ಯುವತಿ.
ಈಕೆಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ ಆದ ಬಳಿಕ ಆಗಾಗ ಹೊಟ್ಟೆ ನೋವು ಬರುತ್ತಿತ್ತು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net