

ಶಿಗ್ಗಾಂವಿ: ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವೃದ್ಧರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿಶುವಿನಹಾಳದಲ್ಲಿ ಗುರುವಾರ ಸಂಭವಿಸಿದೆ.
ಗ್ರಾಮದ ಶಿವನಗೌಡ ಬಸನಗೌಡ ಹಿರೇಗೌಡ್ರ (70) ಮೃತ ವೃದ್ಧರು.
ಇವರು ಕೆಲ ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹುಲಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.