

ಹಾವೇರಿ: ಹೊಟ್ಟನೋವು ತಾಳಲಾರದೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯತ್ತಿನಹಳ್ಳಿಯಲ್ಲಿ ಭಾನುವಾರ ನಡೆದಿದೆ.
ಭರಮಪ್ಪ ಗದಿಗೆಪ್ಪ ಹಿಕ್ಕಡಿ (59) ಮೃತ ವ್ಯಕ್ತಿ.
ಇವರು ಮೂಲವ್ಯಾದಿ ಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೆ ಆಗಾಗ ಬರುತ್ತಿದ್ದ ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.